ಮೈಸೂರು : ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ಹಾಗೂ ಮನೆ ಕಟ್ಟಿಕೊಂಡಿರುವವರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಅರಣ್ಯ ಭೂಮಿ ಹಕ್ಕುಪತ್ರ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂದಾಯ ಸಚಿವರೊಂದಿಗೆ ಸಮಾಲೋಚನೆ ನಡೆಸಿ ಅರಣ್ಯ ಮತ್ತು ಕಂದಾಯ ಭೂಮಿಯ ಜಂಟಿ ಸಮೀಕ್ಷೆ ನಡೆಸುವ ಮೂಲಕ ಕಾನೂನು ವ್ಯಾಪ್ತಿಯಲ್ಲಿ ಹಕ್ಕುಪತ್ರ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
3 ಎಕರೆಗಿಂತ ಕಡಿಮೆ ಪ್ರದೇಶದಲ್ಲಿ 1980 ಕ್ಕೂ ಮೊದಲು ಉಳುಮೆ ಮಾಡುತ್ತಿರುವ ಮತ್ತು ಮನೆ ಕಟ್ಟಿಕೊಂಡು ಮೂರು ತಲೆಮಾರಿನಿಂದ ವಾಸಿಸುತ್ತಿರುವವರಿಗೆ ಮಾತ್ರ ಪರಿಹಾರ ಒದಗಿಸುವ ಸಂಬಂಧ ನಿಗಧಿತ ಅವಧಿಯಲ್ಲಿ ಅರ್ಜಿ ಸಲ್ಲಿಸಿದ್ದರೆ ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.