ಶಿವಮೊಗ್ಗ: ಜುಲೈ 28ರ ನಂತರ ರಾಜಕೀಯ ವಾತಾವರಣ ಬದಲಾಗಲಿದೆ. ಜೆಡಿಎಸ್ ಪಕ್ಷಕ್ಕೆ ಕಡಿಮೆ ಸ್ಥಾನ ಬಂದಿದ್ದರೂ, ಹೆಚ್.ಡಿ. ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕರಾಗಿ ವಿಜೃಂಭಿಸುತ್ತಿದ್ದು, ಅಧಿಕೃತ ವಿಪಕ್ಷ ನಾಯಕರಾಗುವ ಸಾಧ್ಯತೆ ಇದೆ ಎಂದು ಮಾಜಿ ಶಾಸಕ ಆಯನೂರು ಮಂಜುನಾಥ್ ಹೇಳಿದ್ದಾರೆ.
ಜು. 28ರಂದೇ ಕುಮಾರಸ್ವಾಮಿ ವಿಪಕ್ಷ ನಾಯಕರಾಗಿ ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆ ಇದೆ. ಯಾರನ್ನು ಬಿಟ್ಟು ಬಂದೆನೋ ಅವರನ್ನು ಒಪ್ಪಿಕೊಳ್ಳುವ ಅನಿವಾರ್ಯತೆ ಬಂದಿದೆ ಎಂದು ಆಯನೂರು ಮಂಜುನಾಥ್ ಹೇಳಿದ್ದಾರೆ.
ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿದಿವೆ. ಕಾಂಗ್ರೆಸ್ ನಾಯಕರು ಕೂಡ ಈ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ. ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಬಹಳ ಕಡಿಮೆ ಸ್ಥಾನ ದೊರೆತಿದೆ. ವಿರೋಧ ಪಕ್ಷದ ನಾಯಕರಾಗಿ ಕುಮಾರಸ್ವಾಮಿ ವಿಜೃಂಭಿಸುತ್ತಿದ್ದಾರೆ. ಜುಲೈ 28ರ ನಂತರ ಅಧಿಕೃತ ವಿಪಕ್ಷ ನಾಯಕರಾಗಿ ಆಯ್ಕೆಯಾಗುವ ನಿರೀಕ್ಷೆ ಇದೆ. ಯಾರನ್ನು ಬಿಟ್ಟು ಬಂದೆನೋ ಅವರನ್ನೇ ಅಪ್ಪಿಕೊಳ್ಳುವ ಸಂದರ್ಭ ಬಂದಿದೆ ಎಂದು ಹೇಳಿದ್ದಾರೆ.
ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಆಯನೂರು ಮಂಜುನಾಥ್ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸೇರಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದರು.