HomeKarnatakaBIG NEWS: ವಿಪಕ್ಷಗಳ ಮಹಾ ಮೈತ್ರಿಕೂಟ ಸಭೆ: ಬೆಂಗಳೂರಿನಲ್ಲಿ ಹಲವೆಡೆ ಸಂಚಾರ ಮಾರ್ಗ ಬದಲಾವಣೆ

BIG NEWS: ವಿಪಕ್ಷಗಳ ಮಹಾ ಮೈತ್ರಿಕೂಟ ಸಭೆ: ಬೆಂಗಳೂರಿನಲ್ಲಿ ಹಲವೆಡೆ ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು: ವಿಧಾನಸಭೆ ಅಧಿವೇಶನದ ನಡುವೆಯೇ ಬೆಂಗಳೂರಿನಲ್ಲಿ ವಿಪಕ್ಷ ನಾಯಕರ ಮಹಾ ಮೈತ್ರಿಕೂಟ ಸಭೆ ಇಂದಿನಿಂದ ಆರಂಭವಾಗಲಿದೆ. ಪ್ರಧಾನಿ ಮೋದಿಯವರನ್ನು ಲೋಕಸಭಾ ಚುನವಣೆಯಲ್ಲಿ ಮಣಿಸಲು ಕರ್ನಾಟಕದಿಂದಲೇ ರಣತಂತ್ರ ಹೆಣೆಯಲು ಪ್ರತಿಪಕ್ಷ ನಾಯಕರು ಸಜ್ಜಾಗಿದ್ದಾರೆ.

ಇಂದು ಹಾಗೂ ನಾಳೆ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ನಲ್ಲಿ ಸಭೆ ನಡೆಯಲಿದ್ದು, 24 ಪಕ್ಷಗಳ 49 ನಾಯಕರು ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

ಬಿ.ಆರ್.ಅಂಬೇಡ್ಕರ್ ರಸ್ತೆ, ಕಬ್ಬನ್ ರಸ್ತೆ, ಪ್ಯಾಲೇಸ್ ರಸ್ತೆ, ರೇಸ್ ಕೋರ್ಸ್ ರಸ್ತೆ, ಶೇಷಾದ್ರಿ ರಸ್ತೆಗಳನ್ನು ಬಳಸದೇ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರಿ ಪೊಲೀಸರು ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿ.ಆರ್. ಅಂಬೇಡ್ಕರ್ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ರಾಜಭವನ ರಸ್ತೆ, ಬಳ್ಳಾರಿ ರಸ್ತೆ ಹಾಗೂ ರೇಸ್ ಕೋರ್ಸ್ ರಸ್ತೆಯಲ್ಲಿಯೂ ಪಾರ್ಕಿಂಗ್ ನಿಷೇಧಿಸಲಾಗಿದೆ

 

For Latest News Updates, Join Our Whatsapp Community🚩
RELATED ARTICLES

Most Popular