HomeKarnatakaರಾಯಚೂರಿನಲ್ಲಿ ಎರಡು ಕೋಮಿನ ನಡುವೆ ಗಲಾಟೆ : 20 ಮಂದಿ ವಿರುದ್ಧ ಪ್ರಕರಣ ದಾಖಲು

ರಾಯಚೂರಿನಲ್ಲಿ ಎರಡು ಕೋಮಿನ ನಡುವೆ ಗಲಾಟೆ : 20 ಮಂದಿ ವಿರುದ್ಧ ಪ್ರಕರಣ ದಾಖಲು

ರಾಯಚೂರು : ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಸಂಬಂಧಿಸಿದಂತೆ ರಾಯಚೂರಿನಲ್ಲಿ ಎರಡು ಕೋಮಿನ ನಡುವೆ ಗಲಾಟೆ ನಡೆದಿದ್ದು, ನಾಲ್ವರನ್ನು  ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ ಸ್ಟಾಗ್ರಾಂ ನಲ್ಲಿ ಅನ್ಯಕೋಮಿನ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ ಹಿಂದೂ ಯುವಕರ ಮೇಲೆ ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಅಕ್ಬರ್, ಶಾಮೀದ್, ಸಮೀರ್, ತಾಜುದ್ದೀನ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಯುವತಿ ಹೆಸರಿನಲ್ಲಿ ಖಾತೆ ತೆರೆದು ಅವಹೇಳನಕಾರಿ ಪೋಸ್ಟ್ ಹಾಕಲಾಗಿದ್ದು, ಈ ವಿಚಾರಕ್ಕೆ 2 ಕೋಮಿನ ನಡುವೆ ಮಾತಿನ ಚಕಮಕಿ ನಡೆದು ಗಲಾಟೆಯಾಗಿದೆ. ಈ ಹಿನ್ನೆಲೆ ಅನ್ಯಕೋಮಿನ 20 ಜನರ ವಿರುದ್ಧ ಹಿಂದೂ ಯುವಕರು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular