ಬೆಂಗಳೂರು: ಲೋಕಸಭಾ ಚುನಾವಣೆಗೆ ರಣತಂತ್ರ ರೂಪಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷ ನಾಯಕರ ಮಹಾ ಮೈತ್ರಿಕೂಟ ಸಭೆ ವಿಚಾರವಾಗಿ ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಕಿಡಿ ಕಾರಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ವಿಪಕ್ಷ ನಾಯಕರು ಅದೆಷ್ಟೇ ಸಭೆ ನಡೆಸಲಿ, ಏನೇ ನಾಟಕಗಳನ್ನು ಮಾಡಿದರೂ ಜನರು ಬುದ್ಧಿ ಕಲಿಸುತ್ತಾರೆ. ದೇಶದಲ್ಲಿ ಮತ್ತೊಮ್ಮೆ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ. ಕೇಂದ್ರದಲ್ಲಿ ಮತ್ತೊಮ್ಮೆ ಮೋದಿಯವರೇ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದರು.
ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದನ್ನು ಯಾವ ಶಕ್ತಿಗಳಿಂದಲೂ ತಡೆಯಲು ಸಾಧ್ಯವಿಲ್ಲ. ವಿಪಕ್ಷ ನಾಯಕರ ಸಭೆಯಿಂದ ಯಾವ ಪ್ರಯೋಜನವೂ ಇಲ್ಲ ಎಂದು ಹೇಳಿದರು.