ಬೆಂಗಳೂರು : ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಸಿಬಿಐ ತನಿಖೆಗೆ ವಹಿಸಲಾಗುತ್ತದೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಸಚಿವರು ಬೆಂಗಳೂರಿನ ಬಸವನಗುಡಿಯಲ್ಲಿರುವ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್ನಲ್ಲಿ ಠೇವಣಿದಾರರಿಗೆ ಅನ್ಯಾಯವಾಗಿದೆ , ಆದ್ದರಿಂದ ಅವರ ಹಿತಕಾಯಲು ಸಿಬಿಐಗೆ ಪ್ರಕರಣವನ್ನು ಒಪ್ಪಿಸಲಾಗುವುದು ಎಂದರು.
ಸಾರ್ವಜನಿಕರಿಂದ ಅಪಾರ ಪ್ರಮಾಣದ ಹಣ ಠೇವಣಿ ರೂಪದಲ್ಲಿ ಸಂಗ್ರಹಿಸಿ ವಾಪಸ್ ನೀಡದೆ ವಂಚನೆ ಎಸಗಿರುವುದು ವಿವಿಧ ತನಿಖೆಗಳಲ್ಲಿ ಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆಗೆ ಸಿಬಿಐಗೆ ವಹಿಸಲಾಗುವುದು ಎಂದರು. ಬ್ಯಾಂಕ್ ಗೆ ಸಂಬಂಧಿಸಿದ ದಾಖಲೆಗಳನ್ನು ಆಂಗ್ಲ ಭಾಷೆಗೆ ಅನುವಾದಿಸುವ ಕಾರ್ಯ ಪ್ರಗತಿಯಲ್ಲಿದೆ.ಇದಾದ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ, ಅನ್ಯಾಯಕ್ಕೊಳಗಾದ ಗ್ರಾಹಕರಿಗೆ ನ್ಯಾಯ ಒದಗಿಸುತ್ತೇವೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದರು.