HomeKarnatakaBREAKING: ಮನೆಯಲ್ಲೇ ಮಹಿಳಾ ಟೆಕ್ಕಿ ಆತ್ಮಹತ್ಯೆ: ಪತಿ ಪೊಲೀಸ್ ವಶಕ್ಕೆ

BREAKING: ಮನೆಯಲ್ಲೇ ಮಹಿಳಾ ಟೆಕ್ಕಿ ಆತ್ಮಹತ್ಯೆ: ಪತಿ ಪೊಲೀಸ್ ವಶಕ್ಕೆ

ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಮಹಿಳಾ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 30 ವರ್ಷದ ದಿವ್ಯಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.

ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯ ಜೋಗಿಪಾಳ್ಯ ಪತಿಯ ಮನೆಯ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2014ರಲ್ಲಿ ಟೆಕ್ಕಿ ಅರವಿಂದ್ ಜೊತೆಗೆ ದಿವ್ಯಾ ಮದುವೆಯಾಗಿತ್ತು. ಮದುವೆಯ ಬಳಿಕ ಗಂಡನ ಕುಟುಂಬದವರ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿತ್ತು. ಗಂಡ ಮತ್ತು ಆತನ ಕುಟುಂಬದವರು ಮಗಳನ್ನು ಕೊಲೆ ಮಾಡಿದ್ದಾರೆ ಎಂದು ಮೃತ ದಿವ್ಯಾ ಪೋಷಕರು ಹಲಸೂರು ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಹಲಸೂರು ಪೊಲೀಸರು ಅರವಿಂದ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular