ನವದೆಹಲಿ : ಕರ್ನಾಟಕ, ಮಹಾರಾಷ್ಟ್ರ, ಗೋವಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರ್ನಾಟಕ, ಮಹಾರಾಷ್ಟ್ರ, ಗೋವಾ, ಕೇರಳ ಹಾಗೂ ಉತ್ತರ ಭಾರತದ ಹಿಮಾಚಲ ಪ್ರದೇಶ, ಪಶ್ಚಿಮ ರಾಜಸ್ಥಾನ, ಮಧ್ಯಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ಗುಜರಾತ್ ಉತ್ತರಾಖಂಡ, ಪೂರ್ವ ರಾಜಸ್ಥಾನ, ಒಡಿಶಾ, ಅಸ್ಸಾಂ ಮತ್ತು ಮೇಘಾಲಯ, ವಿದರ್ಭ ಮತ್ತು ಛತ್ತೀಸ್ಗಢದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಗುಜರಾತ್ಗೆ ಆರೆಂಜ್ ಅಲರ್ಟ್ ನೀಡಿದ್ದು, ಜುಲೈ 18 ರಿಂದ ರಾಜ್ಯದಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗಲಿದ್ದು, ಜುಲೈ 19 ಮತ್ತು 20 ರಂದು ಭಾರಿ ಮಳೆಯಾಗಲಿದೆ ಎಂದು ಹೇಳಿದೆ. ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್ ಗಢದಲ್ಲಿ ಜುಲೈ 17 ಮತ್ತು 18 ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕ, ಗೋವಾ ಮತ್ತು ಮಧ್ಯ ಮಹಾರಾಷ್ಟ್ರದಲ್ಲಿ ಮುಂದಿನ ಐದು ದಿನಗಳವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಈ ಪ್ರದೇಶಗಳಲ್ಲಿ ಜುಲೈ 19 ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಐಎಂಡಿ ಈ ಪ್ರದೇಶಗಳಿಗೆ ಆರೆಂಜ್ ಎಚ್ಚರಿಕೆ ನೀಡಿದೆ.