ಎರಡು ವಾರ ಅಮೆರಿಕ ಪ್ರವಾಸ ಕೈಗೊಂಡ ಆದಿಚುಂಚನಗಿರಿ ಶ್ರೀ

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ಎರಡು ವಾರ ಅಮೆರಿಕ ಪ್ರವಾಸ ಕೈಗೊಂಡಿದ್ದು, ಸೋಮವಾರ ಅಮೆರಿಕಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಶ್ರೀಗಳು ನ್ಯೂಜೆರ್ಸಿಯಲ್ಲಿ ಕಾಲಭೈರವೇಶ್ವರ ಸ್ವಾಮಿ ದೇವಾಲಯ ನಿರ್ಮಾಣ ಕಾರ್ಯ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಅಲ್ಲದೆ, ಅಮೆರಿಕ ಸಂಯುಕ್ತ ಸಂಸ್ಥಾನದ ಹಲವು ರಾಜ್ಯಗಳಿಗೆ ಭೇಟಿ ನೀಡಿ ಧಾರ್ಮಿಕ, ಆಧ್ಯಾತ್ಮಿಕ, ಪ್ರವಚನ ಸತ್ಸಂಗಳಲ್ಲಿ ಭಾಗವಹಿಸಲಿದ್ದಾರೆ. ನಿರ್ಮಲಾನಂದನಾಥ ಸ್ವಾಮೀಜಿಗಳೊಂದಿಗೆ ಮಂಗಳೂರು ಶಾಖಾ ಮಠದ ಕಾರ್ಯದರ್ಶಿ ಧರ್ಮಪಾಲನಾಥ ಸ್ವಾಮೀಜಿ ತೆರಳಿದ್ದಾರೆ.

ಅಮೆರಿಕದಲ್ಲಿ ನೆಲೆಸಿರುವ ಭಕ್ತರ ಅಭಿಲಾಷೆಯಂತೆ ಭೈರವೈಕ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ನ್ಯೂಜೆರ್ಸಿಯಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಾಖೆ ಆರಂಭಿಸಿದ್ದು, ಕಳೆದ ಒಂದು ದಶಕದಿಂದ ಧಾರ್ಮಿಕ, ಆಧ್ಯಾತ್ಮಿಕ, ಸಾಮಾಜಿಕ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಕಾಲಭೈರವೇಶ್ವರ ಸ್ವಾಮಿ ದೇವಾಲಯ ನಿರ್ಮಾಣ ಮಾಡಲಾಗುತ್ತಿದೆ. ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಅಮೆರಿಕ ಭೇಟಿ ವೇಳೆ ನಿರ್ಮಲಾನಂದನಾಥ ಸ್ವಾಮೀಜಿ ಪರಿಶೀಲನೆ ನಡೆಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read