
ರಾಜ್ಯದ ಸಚಿವರನ್ನು ಕರೆಯಿಸಿ ಎರಡು ತಿಂಗಳಲ್ಲಿ ಅವರು ಕೈಗೊಂಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಮೌಲ್ಯಮಾಪನ ಮಾಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದರೆ ಕಾರಣಾಂತರದಿಂದ ಸಚಿವರ ಜೊತೆಗಿನ ನಾಳೆ ನಿಗದಿಯಾಗಿದ್ದ ರಾಹುಲ್ ಗಾಂಧಿ ಸಭೆ ರದ್ದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ವಿಪಕ್ಷಗಳ ಜೊತೆಗಿನ ಸಭೆ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮಣಿಸಲು ವಿಪಕ್ಷಗಳು ಒಗ್ಗಟ್ಟಿನ ಮಂತ್ರ ಪಠಿಸಿವೆ. ಈ ನಿಟ್ಟಿನಲ್ಲಿ ರಣತಂತ್ರ ರೂಪಿಸಲು ಬೆಂಗಳೂರಿನಲ್ಲಿ ವಿಪಕ್ಷಗಳ ಮಹಾ ಮೈತ್ರಿ ಕೂಟ ಸಭೆ ನಡೆಸುತ್ತಿದೆ.

