HomeKarnatakaBIG NEWS: ಮೇಕೆದಾಟು ಹೋರಾಟ ಕಾಂಗ್ರೆಸ್ ನ ಮಹಾನಾಟಕ; ಯೋಜನೆಗೆ ವಿರೋಧಿಸಿದ್ದ ತಮಿಳುನಾಡು ಸಿಎಂ ಗೆ...

BIG NEWS: ಮೇಕೆದಾಟು ಹೋರಾಟ ಕಾಂಗ್ರೆಸ್ ನ ಮಹಾನಾಟಕ; ಯೋಜನೆಗೆ ವಿರೋಧಿಸಿದ್ದ ತಮಿಳುನಾಡು ಸಿಎಂ ಗೆ ಬೊಕೆ ಹಿಡಿದು ಸ್ವಾಗತಿಸಿದ ಕೈ ನಾಯಕರು; ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಾಯಕರು ನಡೆಸಿದ್ದ ಪಾದಯಾತ್ರೆ ಹೋರಾಟ ಒಂದು ಮಹಾ ನಾಟಕ ಎಂದು ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಆರ್. ಅಶೋಕ್, ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮೇಕೆದಾಟು ಯೋಜನೆಗಾಗಿ ಹೋರಾಟ ನಡೆಸಿದ್ದ ಕಾಂಗ್ರೆಸ್ ನಾಯಕರು ಈಗ ಎಂ.ಕೆ. ಸ್ಟಾಲಿನ್ ಗೆ ಬೊಕೆ ನೀಡಿ ಸ್ವಾಗತಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂದೆ ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಾಯಕರು ಹೋರಾಟ ನಡೆಸಿದರು. ನೀರಿಗಾಗಿ ನಾವು ಹೋರಾಡುತ್ತಿದ್ದೇವೆ ಎಂದು ಬೊಗಳೆ ಬಿಟ್ಟರು. ನಮ್ಮ ಯೋಜನೆಗಾಗಿ ವಿರೋಧಿಸಿದ ಸ್ಟಾಲಿನ್ ಅವರನ್ನು ಈಗ ಕಾಂಗ್ರೆಸ್ ಸ್ವಾಗತಿಸಿದೆ. ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular