HomeCrimeBREAKING : ಬೆಂಗಳೂರಿನಲ್ಲಿ ಮತ್ತೊಂದು `ಡಬಲ್ ಮರ್ಡರ್’ : ಮಗನಿಂದಲೇ ತಂದೆ, ತಾಯಿಯ ಬರ್ಬರ ಹತ್ಯೆ!

BREAKING : ಬೆಂಗಳೂರಿನಲ್ಲಿ ಮತ್ತೊಂದು `ಡಬಲ್ ಮರ್ಡರ್’ : ಮಗನಿಂದಲೇ ತಂದೆ, ತಾಯಿಯ ಬರ್ಬರ ಹತ್ಯೆ!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಡಬಲ್ ಮರ್ಡರ್ ಪ್ರಕರಣ ಬೆಳಕಿಗೆ ಬಂದಿದ್ದು,, ಕುಡಿದ ಮತ್ತಿನಲ್ಲಿ ಸ್ವಂತ ಮಗನೇ ತಂದೆ, ತಾಯಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ವೃದ್ದ ದಂಪತಿಯನ್ನು ಸ್ವಂತ ಮಗನೇ ಹತ್ಯೆ ಮಾಡಿದ್ದಾನೆ.  ಮಗ ಶರತ್ ಎಂಬಾತ್ ತನ್ನ ತಂದೆ ಭಾಸ್ಕರ್ ಹಾಗೂ ತಾಯಿ ಶಾಂತಾಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆಯೂ ಶರತ್ ತನ್ನ ತಂದೆ, ತಾಯಿಯ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದ. ಘಟನಾ ಸ್ಥಳಕ್ಕೆ ಕೊಡಿಗೆಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular