HomeKarnatakaBIG NEWS: ಗೃಹಲಕ್ಷ್ಮೀ ಯೋಜನೆ; ಸಹಾಯವಾಣಿ ಸಂಖ್ಯೆ ಬಿಡುಗಡೆ

BIG NEWS: ಗೃಹಲಕ್ಷ್ಮೀ ಯೋಜನೆ; ಸಹಾಯವಾಣಿ ಸಂಖ್ಯೆ ಬಿಡುಗಡೆ

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಹೆಲ್ಪ್ ಲೈನ್ ಸಂಖ್ಯೆ ಬಿಡುಗಡೆ ಮಾಡಲಾಗಿದೆ. ಜನರು ಯಾವುದೇ ಮಧ್ಯವರ್ತಿಗಳ ಸಹಾಯ ಪಡೆಯುವುದು ಬೇಡ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಪಡಿತರ ಚೀಟಿಯ ಸಂಖ್ಯೆಯನ್ನು 8147500500 ಈ ಸಂಖ್ಯೆಗೆ SMS ಮಾಡಿ ಕೂಡಲೇ ಮನೆ ಯಜಮಾನಿಗೆ ಸ್ಥಳ ಗೊತ್ತುಪಡಿಸಿದ ದಿನಾಂಕ, ಸಮಯದ ಸಂದೇಶ ಬರುತ್ತದೆ. ಹಾಗಾಗಿ ಗೃಹಲಕ್ಷ್ಮೀ ಯೋಜನೆ ಬಗ್ಗೆ ಯಾವುದೇ ಗೊಂದಲ ಬೇಡ. ಮಧ್ಯವರ್ತಿಗಳ ಸಹಾಯ ಪಡೆಯುವ ಅಗತ್ಯವೂ ಇಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯೋಜನೆ ಬಗ್ಗೆ ಇನ್ನೂ ಏನಾದರೂ ಗೊಂದಲ ಇದ್ದರೆ ಇಲಾಖೆಯ 1902 ಈ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಿ. ಬೇರೆ ಯೋಜನೆಗಳಲ್ಲಿ ಕೆಲ ಗೊಂದಲ ಆದ ಕಾರಣ ಈ ಯೋಜನೆಯನ್ನು ಆರಂಭದಲ್ಲಿಯೇ ಸರಳೀಕರಿಸಿದ್ದೇವೆ. ಗೃಹಲಕ್ಷ್ಮೀ ಯೋಜನೆ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular