
12 ವರ್ಷದ ಬಾಲಕಿ ಜುಲೈ 15 ರಂದು ಸಂಬಂಧಿಕರ ಮನೆಗೆ ಹೋಗಿ ಬರುವುದಾಗಿ ಹೇಳಿ ನಾಪತ್ತೆಯಾಗಿದ್ದಳು. ನಂತರ ಮೂರು ದಿನದ ನಂತರ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ದುಷ್ಕರ್ಮಿಗಳು ಬಾವಿಯಲ್ಲಿ ಎಸೆದು ಹೋಗಿದ್ದಾರೆ.ಈ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

