alex Certify ಹುಬ್ಬಳ್ಳಿ-ಧಾರವಾಡ ನಡುವೆ ಲಘು ರೈಲು ಸಂಚಾರ; ದೇಶದಲ್ಲೇ ಮೊದಲ ಯೋಜನೆ ಶೀಘ್ರದಲ್ಲೇ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಬ್ಬಳ್ಳಿ-ಧಾರವಾಡ ನಡುವೆ ಲಘು ರೈಲು ಸಂಚಾರ; ದೇಶದಲ್ಲೇ ಮೊದಲ ಯೋಜನೆ ಶೀಘ್ರದಲ್ಲೇ ಆರಂಭ

ಹುಬ್ಬಳ್ಳಿ: ಹುಬಳ್ಳಿ ಧಾರವಾಡ ಅವಳಿ ನಗರಗಳ ನಡುವೆ ದಿನದಿಂದ ದಿನಕ್ಕೆ ವಾಹನ ದಟ್ಟಣೆ ಹೆಚ್ಚುತ್ತಿದ್ದು, ಜನರ ಓಡಾಟವೂ ಹೆಚ್ಚಾಗುತ್ತಿದೆ. ಈ ಸಮಸ್ಯೆ ನೀಗಿಸಲು ಸರ್ಕಾರ ಹೊಸ ಯೋಜನೆ ಜಾರಿಗೆ ತರಲು ಮುಂದಾಗಿದೆ.

ಹುಬ್ಬಳ್ಳಿ-ಧಾರವಾಡ ನಗರಗಳ ನಡುವೆ ಲಘು ರೈಲು ಸಂಚಾರಕ್ಕೆ ಯೋಜನೆ ರೂಪಿಸಲಾಗಿದೆ. ಈ ಯೋಜನೆ ದೇಶದಲ್ಲಿಯೇ ಮೊದಲ ಯೋಜನೆಯಾಗಿದ್ದು, ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ಬರಲಿದೆ.

ಈಗಾಗಲೇ ಹುಬ್ಬಳ್ಳಿ-ಧಾರವಾಡ ನಡುವೆ ಬಿ ಆರ್ ಟಿ ಎಸ್ ಬಸ್ ಗಳು ಸಂಚರಿಸುತ್ತಿವೆ. ಇವುಗಳ ಜೊತೆಗೆ ಜನರ ಅನುಕೂಲಕ್ಕಾಗಿ ಹಾಗೂ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಲಘು ರೈಲು ಸಂಚಾರ ಆರಂಭಿಸಲು ಯೋಜನೆ ರೂಪಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್, ಲಘು ರೈಲು ಸಾರಿಗೆ ಯೋಜನೆ ಬಗ್ಗೆ ಕಾರ್ಯತಂತ್ರ ರೂಪಿಸಲಾಗಿದ್ದು, ನಾಲ್ಕು ವಾರಗಳಲ್ಲಿ ಪ್ರಸ್ತಾವನೆ ಸಿದ್ಧವಾಗಲಿದೆ. ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ-ಪಿಪಿಪಿ ಮಾದರಯಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗುವುದು. ಅಂದುಕೊಂಡಂತೆ ಆದರೆ ಕೇವಲ ಒಂದುವರೆ ವರ್ಷದಲ್ಲಿ ಈ ಯೋಜನೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ಬಳಿಕ ಜನರು ವಾಸ್ತವ್ಯಕ್ಕಾಗಿ ಹಾಗೂ ಕೈಗಾರಿಕಾ ಉದ್ದೇಶಗಳಿಗಾಗಿ ಹುಬ್ಬಳ್ಳಿ-ಧಾರವಾಡ ಆಯ್ಕೆ ಮಾಡಿಕೊಳ್ಳುತ್ತಾರೆ. ಅವಳಿನಗರ ಮುಂದಿನ ಹತ್ತು ವರ್ಷಗಳಲ್ಲಿ ವೇಗವಾಗಿ ಬೆಳೆಯಲಿದೆ. ಹೀಗಾಗಿ ಅಭಿವೃದ್ಧಿ ದೃಷ್ಟಿಯಿಂದ ಇಂತದ್ದೊಂದು ಮಹತ್ವದ ಯೋಜನೆ ಜಾರಿಗೊಳಿಸುವ ಅಗತ್ಯವಿದೆ ಎಂದು ವರದಿಯನ್ನೂ ಸಲ್ಲಿಸಲಾಗಿದೆ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...