ಮೈಸೂರು : ಪುಂಡರು ನಡುರಸ್ತೆಯಲ್ಲಿ ಗಂಟೆಗಟ್ಟಲೆ ಬೈಕ್ ವ್ಹೀಲಿಂಗ್ ಮಾಡುತ್ತಾ ಅಟ್ಟಹಾಸ ಮೆರೆಯುವುದು ಇತ್ತೀಚೆಗೆ ಹೆಚ್ಚಾಗಿದೆ.
ಪೊಲೀಸರು ರಸ್ತೆ ಮೇಲೇ ಇದ್ದರೂ, ಅವರ ಕಣ್ತಪ್ಪಿಸಿ ಪುಂಡರು ವ್ಹೀಲಿಂಗ್ ಮಾಡುತ್ತಿರುತ್ತಾರೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಂಡ ಮೈಸೂರು ಪೊಲೀಸರು ಪುಂಡರ ಪುಂಡಾಟಕ್ಕೆ ಬ್ರೇಕ್ ಹಾಕಿದ್ದಾರೆ.
ವೀಲಿಂಗ್ ಮಾಡಿದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ ಪೊಲೀಸರು ವಾಹನಗಳನ್ನು ಜಪ್ತಿ ಮಾಡುತ್ತಿದ್ದಾರೆ. ವೀಲಿಂಗ್ ಪ್ರಕರಣವು ಶಿಕ್ಷಾರ್ಹ ಹಾಗೂ ದಂಡಾರ್ಹ ಅಪರಾಧವಾಗಿದೆ. ಅವರಿಗೆ ದಂಡ ವಿಧಿಸುವ ಜೊತೆ ವಾಹನ ಕೂಡ ಜಪ್ತಿ ಮಾಡಲಾಗುತ್ತಿದೆ. ಅದೇ ರೀತಿ ಪೋಷಕರ ಮೇಲೂ ಕ್ರಮ ಕೈಗೊಳ್ಳುವ ಅಧಿಕಾರ ಪೊಲೀಸರಿಗಿದೆ. ಅಪ್ರಾಪ್ತ ಮಕ್ಕಳಿಗೆ ಬೈಕ್ ಕೊಟ್ಟರೆ ಪೋಷಕರ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ. ಬೈಕ್ ವ್ಹೀಲಿಂಗ್ ಮಾಡಿದವರ ವಿರುದ್ಧ ಐಪಿಸಿ ಸೆಕ್ಷನ್ 270 ರಡಿಯಲ್ಲಿ 1000 ರೂಪಾಯಿ ದಂಡ ಅಥವಾ 6 ತಿಂಗಳು ಜೈಲು ಶಿಕ್ಷೆ ವಿಧಿಸಬಹುದಾಗಿದೆ.