HomeKarnatakaಮಹಿಳೆಯರಿಗೆ ಗುಡ್ ನ್ಯೂಸ್: ‘ಯಜಮಾನಿ’ ಖಾತೆಗೆ 2 ಸಾವಿರ ರೂ. ಪಾವತಿಸುವ ‘ಗೃಹಲಕ್ಷ್ಮಿ’ ಯೋಜನೆಗೆ ಇಂದು...

ಮಹಿಳೆಯರಿಗೆ ಗುಡ್ ನ್ಯೂಸ್: ‘ಯಜಮಾನಿ’ ಖಾತೆಗೆ 2 ಸಾವಿರ ರೂ. ಪಾವತಿಸುವ ‘ಗೃಹಲಕ್ಷ್ಮಿ’ ಯೋಜನೆಗೆ ಇಂದು ಚಾಲನೆ

ಬೆಂಗಳೂರು: ಇಂದು ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ‘ಗೃಹಲಕ್ಷ್ಮಿ’ ಯೋಜನೆಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಲಿದ್ದಾರೆ.

ಯೋಜನೆ ಜಾರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗೆ, ನಾಡಕಚೇರಿ, ಗ್ರಾಮ ಒನ್, ಬೆಂಗಳೂರು ಒನ್ ಸಿಬ್ಬಂದಿಗೆ ಗೃಹಲಕ್ಷ್ಮಿ ಯೋಜನೆ ಜಾರಿಗೆ ತರಬೇತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಯೋಜನೆಯಡಿ ಮನೆಯ ಯಜಮಾನಿಗೆ ಎರಡು ಸಾವಿರ ರೂಪಾಯಿ ನೀಡಲಾಗುವುದು.

ಯಜಮಾನಿಯ ಪತಿಯ ಆಧಾರ್ ಕೂಡ ಬೇಕಾಗುತ್ತದೆ.

ಆಧಾರ್ ಲಿಂಕ್ ಆಗದ ಬೇರೆ ಖಾತೆಗೆ ಹಣ ಹಾಕಬೇಕು ಎನ್ನುವವರು ಪಾಸ್ ಬುಕ್ ಜೆರಾಕ್ಸ್ ಪ್ರತಿ ಕೊಡಬೇಕು.

ಯೋಜನೆಯ ಉಚಿತ ಲಾಭ ಪಡೆದುಕೊಳ್ಳಲು ಸಹಾಯವಾಣಿ ಸಂಖ್ಯೆ ಆರಂಭಿಸಲಾಗಿದೆ. 8147500500 ಕ್ಕೆ ಪಡಿತರ ಚೀಟಿ ಸಂಖ್ಯೆ ಎಸ್ಎಂಎಸ್ ಮಾಡಿದಲ್ಲಿ ನೋಂದಣಿ ಸ್ಥಳ, ಗೊತ್ತುಪಡಿಸಿದ ದಿನಾಂಕ, ಸಮಯದ ಸಂದೇಶ ರವಾನೆ ಆಗುತ್ತದೆ.

ಅರ್ಜಿ ಹಾಕಲು ಯಾವುದೇ ಮಧ್ಯವರ್ತಿಗಳ ಮೊರೆ ಹೋಗುವ ಅಗತ್ಯ ಇರುವುದಿಲ್ಲ.

ಗೊಂದಲವಿದ್ದರೆ 1902 ನಂಬರ್ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular