HomeKarnatakaಕುಟೀರ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಗೃಹಜ್ಯೋತಿ ಯೋಜನೆಯಡಿ ಹೆಚ್ಚುವರಿ ವಿದ್ಯುತ್...

ಕುಟೀರ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಗೃಹಜ್ಯೋತಿ ಯೋಜನೆಯಡಿ ಹೆಚ್ಚುವರಿ ವಿದ್ಯುತ್ ಬಳಕೆಗೆ ಅವಕಾಶ

ಬೆಂಗಳೂರು: ಕುಟೀರ ಜ್ಯೋತಿ, ಭಾಗ್ಯಜ್ಯೋತಿ, ಅಮೃತ ಜ್ಯೋತಿ ಯೋಜನೆಗಳನ್ನು ಗೃಹಜ್ಯೋತಿ ಯೋಜನೆಯಡಿ ವಿಲೀನಗೊಳಿಸಲಾಗಿದೆ.

ಮೂರು ಯೋಜನೆಗಳ 50 ಲಕ್ಷ ಫಲಾನುಭವಿಗಳಿಗೆ ಉಚಿತ ವಿದ್ಯುತ್ ಮಿತಿ ಹೆಚ್ಚಾಗಿದೆ. ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಜಾರಿಯಾದ ಹಿನ್ನೆಲೆಯಲ್ಲಿ ಬಡವರಿಗೆ ಉಚಿತ ವಿದ್ಯುತ್ ಪೂರೈಕೆಗಾಗಿ ಜಾರಿಯಲ್ಲಿದ್ದ ಕುಟೀರ ಜ್ಯೋತಿ, ಭಾಗ್ಯಜ್ಯೋತಿ ಅಮೃತ ಜ್ಯೋತಿ ಯೋಜನೆಗಳನ್ನು ವಿಲೀನಗೊಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಡವರಿಗೆ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಯೋಜನೆ ಅಡಿ 40 ಯೂನಿಟ್ ವರೆಗೆ ಉಚಿತ ವಿದ್ಯುತ್ ಬಳಸಲು ಅವಕಾಶವಿತ್ತು. ಅವರನ್ನು ಗೃಹಜ್ಯೋತಿ ಯೋಜನೆಯಡಿ ವಿಲೀನಗೊಳಿಸಲಾಗಿದ್ದು, ಸರಾಸರಿ ವಿದ್ಯುತ್ ಬಳಕೆ 53 ಯೂನಿಟ್ ಮತ್ತು ಶೇಕಡ 10 ರಷ್ಟು ಹೆಚ್ಚುವರಿ ಸೇರಿಸಿ 58 ಯೂನಿಟ್ ವರೆಗೆ ಉಚಿತ ವಿದ್ಯುತ್ ಬಳಕೆಗೆ ಅವಕಾಶ ಕಲ್ಪಿಸಲಾಗಿದೆ.

ಕಳೆದ ವರ್ಷ ಜಾರಿಗೊಳಿಸಲಾಗಿದ್ದ ಅಮೃತಜ್ಯೋತಿ ಯೋಜನೆ ಅಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಿದ್ದು, ಗೃಹಜೋತಿ ಯೋಜನೆ ಅಡಿ ಸೇರ್ಪಡೆಯಾಗುವುದರಿಂದ ಶೇಕಡ 10ರಷ್ಟು ಅಂದರೆ 82 ಯೂನಿಟ್ ವರೆಗೆ ಉಚಿತ ವಿದ್ಯುತ್ ಬಳಕೆಗೆ ಅವಕಾಶ ಕಲ್ಪಿಸಲಾಗಿದೆ. 82 ಯುನಿಟ್ ಗಿಂತ ಕಡಿಮೆ ವಿದ್ಯುತ್ ಬಳಕೆಗೆ ಶುಲ್ಕ ಪಾವತಿಸುವಂತಿಲ್ಲ. ಈ ಮೂರು ಯೋಜನೆಗಳಿಗೆ ಸರ್ಕಾರ ನಿಗದಿಪಡಿಸಿದ್ದ ಮಿತಿಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡಿದರೆ ಹೆಚ್ಚುವರಿ ಬಳಕೆಗೆ ಶುಲ್ಕ ಪಾವತಿಸಬೇಕಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular