ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹಿಂದಿನ ಸರ್ಕಾರದ ಅವಧಿಯಲ್ಲಿ ಸ್ಥಗಿತಗೊಳಿಸಲಾಗಿದ್ದ ಕೃಷಿ ಭಾಗ್ಯ ಯೋಜನೆಗೆ ಮರು ಚಾಲನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ರೈತರಿಗೆ ಶೂನ್ಯ ಬಡ್ಡಿದರದಲ್ಲಿ 3 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳವರೆಗೆ ಸಾಲದ ಮಿತಿಯನ್ನು ಹೆಚ್ಚಳ ಮಾಡಲಾಗಿದೆ. ಜೊತೆಗೆ ಹಲವಾರು ರೀತಿಯಲ್ಲಿ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ ಎಂದರು.
ಈ ವೇಳೆ ಸುನಿಲ್ ಕುಮಾರ್ ಮಾತನಾಡಿ, ಕಿಸಾನ್ ಸಮ್ಮಾನ್ ಯೋಜನೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ ಎಂದು ಹೇಳಿ ಅದನ್ನು ಬಿಟ್ಟು ಬೇರೆ ವಿಷಯದ ಬಗಗೆ ಮಾತನಾಡಿದ್ರೆ ಹೇಗೆ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ನಿಮ್ಮ ಅವಧಿಯಲ್ಲಿ ಕೃಷಿ ಭಾಗ್ಯ ಸ್ಥಗಿತಗೊಳಿಸಲಾಗಿತ್ತು. ಅದನ್ನು ಪ್ರಾರಂಭ ಮಾಡಲಾಗಿದೆ ಎಂದರು.