BIG NEWS: ಕ್ಲಬ್ ಚಟುವಟಿಕೆ, ಹಫ್ತಾ ವಸೂಲಿ ಹೆಚ್ಚಾಗುತ್ತಿದೆ; ಕಾನೂನು ಸುವ್ಯವಸ್ಥೆ ಅಪರಾಧ ನಿಯಂತ್ರಣ ಕೈ ತಪ್ಪಿದೆ; ಮಾಜಿ ಸಿಎಂ ಆರೋಪ

ಬೆಂಗಳೂರು: ಕಳೆದ ಎರಡು‌ ತಿಂಗಳಿಂದ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ.‌ ಕಾನೂನು ಸುವ್ಯವಸ್ಥೆ ಅಪರಾದ ನಿಯಂತ್ರಣ ಕೈ ತಪ್ಪುತ್ತಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಹಲವು ಕೇಸ್ ಗಳು ಪೊಲೀಸ್ ಸ್ಟೇಷನ್ ನಲ್ಲಿ ರಿಜಿಸ್ಟರ್ ಆಗುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಬಂದಮೇಲೆ ಮಧ್ಯವರ್ತಿಗಳು ಕೈ ಹಾಕಿ‌ ನಿಯಂತ್ರಣ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು ಎಂದರು.

ಬೆಂಗಳೂರಿನಲ್ಲಿ ಕ್ಲಬ್ ಚಟುವಟಿಕೆಗಳು ಹೆಚ್ಚಾಗಿದೆ, ಹಫ್ತಾ ವಸೂಲಿ ತೀವ್ರವಾಗುತ್ತಿದೆ. ಇಲ್ಲೇ ನೆಲಸಿ ಕ್ರಿಮಿನಲ್ ಚಟುವಟಿಕೆಗಳಿಗೆ ಕುಮ್ಮಕ್ಕು ಕೊಡುವಂತಹ ಕೆಲಸ ಆಗುತ್ತಿದೆ. ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ. ಬಂಧಿತ ಶಂಕಿತರ ಸಂಪರ್ಕದಲ್ಲಿ ಅಂತರಾಷ್ಟ್ರೀಯ ಐಎಸ್ ಐ ಇರುವ ಶಂಕೆ ಇದೆ. ಸಿಸಿಬಿ ಅಧಿಕಾರಿಗಳು ಇದನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

ಬೆಂಗಳೂರು ಸುರಕ್ಷತೆ ಬಗ್ಗೆ ಅಧಿಕಾರಿಗಳು ಫೀಲ್ಡ್ ಗೆ ಇಳಿಬೇಕು. ಇದರ ಹಿಂದೆ ಅಂತಾರಾಷ್ಟ್ರೀಯ ಸಂಸ್ಥೆಗಳ ಬೆಂಬಲವಿದೆ. ಬೆಂಗಳೂರಿನಲ್ಲಿ ಸ್ಪೋಟ ಮಾಡುವ ಹುನ್ನಾರ ಇದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರಕರಣವನ್ನು ಎನ್ ಐಎ ತನಿಖೆಗೆ ನೀಡಬೇಕು ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read