BIG NEWS: ವರುಣಾರ್ಭಟಕ್ಕೆ ತುಂಬಿ ಹರಿದ ಮಲಪ್ರಭಾ ನದಿ : ರಾಜ್ಯ ಹೆದ್ದಾರಿ ಜಲಾವೃತ; 40 ಗ್ರಾಮಗಳ ಸಂಪರ್ಕ ಕಡಿತ

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ವರುಣಾರ್ಭಟ ಜೋರಾಗಿದ್ದು, ಮಲಪ್ರಭಾ, ಘಟಪ್ರಭಾ ನದಿಗಳು, ಹಳ್ಳಗಳು ತುಂಬಿ ಹರಿಯುತ್ತಿವೆ.

ಖಾನಾಪುರ ತಾಲುಕಿನಲ್ಲಿ ಮಲಪ್ರಭಾ ನದಿ ಅಬ್ಬರಕ್ಕೆ ಅಲಾತ್ರಿ ಸೇರಿದಂತೆ ಹಲವು ಹಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಸಿಂಧನೂರು-ಹೆಮ್ಮಡಗಾ ರಾಜ್ಯ ಹೆದ್ದಾರಿ ಸಂಪೂರ್ಣ ಜಲಾವೃತಗೊಂಡಿದೆ. ರಾಜ್ಯ ಹೆದ್ದಾರಿ ನದಿಯಂತಾಗಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ಈ ಭಾಗದ ರಸ್ತೆ ಮಾರ್ಗವನ್ನು ಬಂದ್ ಮಾಡಿದ್ದು, ಇದರಿಂದಾಗಿ 40ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಇನ್ನು ಮಲಪ್ರಭಾ ನದಿಯಿಂದಾಗಿ ಜಾಂಬೋಟಿ ಬಳಿಯ ಪ್ರಸಿದ್ಧ ಹಬ್ಬನಹಟ್ಟಿ ಆಂಜನೇಯ ದೇವಸ್ಥಾನ ಮುಳುಗಡೆಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read