alex Certify SCHOLARSHIP : ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SCHOLARSHIP : ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : 2023-24ನೇ ಸಾಲಿಗಾಗಿ ಒಂದನೇ ತರಗತಿಯಿಂದ ಅಂತಿಮ ಪದವಿ/ಡಿಪ್ಲೋಮಾ ಮತ್ತು ವೃತ್ತಿಪರ ಪದವಿಯವರೆಗೆ ಕರ್ನಾಟಕದಲ್ಲಿರುವ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿತ ನಮೂನೆ ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯಿಂದ ಶುಲ್ಕ ರಹಿತವಾಗಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು 1ನೇ ತರಗತಿಯಿಂದ ಅಂತಿಮ ಪದವಿ/ ಡಿಪ್ಲೋಮಾವರೆಗೆ ವ್ಯಾಸಂಗ ಮಾಡುತ್ತಿರುವವರು ಸೆಪ್ಟಂಬರ್ 30ರೊಳಗಾಗಿ ಹಾಗೂ ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರು ಅಕ್ಟೋಬರ್ 30 ರೊಳಗಾಗಿ  ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಛೇರಿಯ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...