ಬೆಂಗಳೂರು : ಬೆಂಗಳೂರಿನಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ ಬಂಧಿತ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದಾರೆ.
ತನಿಖಾಧಿಕಾರಿ ಎಸಿಪಿ ಕುಮಾರ್ ನೇತೃತ್ವದಲ್ಲಿ ಪೊಲೀಸ್ ವ್ಯಾನ್ ನಲ್ಲಿ ಶಂಕಿತ ಉಗ್ರರನ್ನು ಕರೆತಂದ ಸಿಸಿಬಿ ಪೊಲೀಸರು ಬೆಂಗಳೂರಿನ ಎನ್ ಐ ಎ (NIA) ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಈ ಹಿನ್ನೆಲೆ ನ್ಯಾಯಾಲಯದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿದ್ದು, ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ.ಹೋಟೆಲ್, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣಗಳೇ ಶಂಕಿತ ಉಗ್ರರ ಟಾರ್ಗೆಟ್ ಆಗಿದ್ದು, ಜನಸಂಖ್ಯೆ ಹೆಚ್ಚಿರುವ ಬಸ್ ನಿಲ್ದಾಣ ಹಾಗೂ ಹೋಟೆಲ್ ಗಳಲ್ಲಿ ಬಾಂಬ್ ಸ್ಪೋಟಿಸಲು ಉಗ್ರರು ಸ್ಕೆಚ್ ಹಾಕಿದ್ದರು ಎಂಬ ಸ್ಪೋಟಕ ಮಾಹಿತಿ ಹೊರಬಿದ್ದಿದೆ.ಪ್ರಕರಣವನ್ನು ಎನ್ ಐ ಎ ತನಿಖೆಗೆ ನೀಡಬೇಕೆಂದು ವಿಪಕ್ಷಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.