HomeKarnatakaಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಆರೋಗ್ಯ ವಿಚಾರಿಸಿದ ಸ್ಪೀಕರ್ ಖಾದರ್, ಸಿಎಂ ಸಿದ್ಧರಾಮಯ್ಯ

ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಆರೋಗ್ಯ ವಿಚಾರಿಸಿದ ಸ್ಪೀಕರ್ ಖಾದರ್, ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಸದನದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಫೋರ್ಟಿಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಸ್ಪೀಕರ್ ಯು.ಟಿ. ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ವಿಚಾರಿಸಿದರು.

ವಿಧಾನಸಭೆಯಲ್ಲಿ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸುವಾಗ ಮಾರ್ಷಲ್ ಗಳ ನಡುವೆ ಉಂಟಾದ ನೂಕು ನುಗ್ಗಲಿನಲ್ಲಿ ಯತ್ನಾಳ್ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿ ಕುಸಿದು ಬಿದ್ದರು. ತಕ್ಷಣವೇ ಬಿಜೆಪಿ ಶಾಸಕರು ಹಾಗೂ ಮಾರ್ಷಲ್ ಗಳು ಅವರನ್ನು ವಿಧಾನಸೌಧದಿಂದ ಹೊರಗೆ ಕರೆತಂದು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದರು. ಚಿಕಿತ್ಸೆ ಬಳಿಕ ಯತ್ನಾಳ್ ಚೇತರಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಸೇರಿದಂತೆ ಹಲವು ಶಾಸಕರು ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಆರೋಗ್ಯ ವಿಚಾರಿಸಿದ್ದಾರೆ. ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಅವರ ಆರೋಗ್ಯ ವಿಚಾರಿಸಿದರು. ವೈದ್ಯರಿಂದ ಯತ್ನಾಳ್ ಅವರ ಆರೋಗ್ಯದ ಸ್ಥಿತಿಗತಿ ಕುರಿತಾಗಿ ಮಾಹಿತಿ ಪಡೆದುಕೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular