HomeKarnatakaಬದುಕಿಗೆ ವಿದಾಯ ಹೇಳುವುದಾಗಿ ವಾಟ್ಸಾಪ್ ನಲ್ಲಿ ಸಂದೇಶ ಹಾಕಿ ಸರ್ಕಾರಿ ನೌಕರ ನಾಪತ್ತೆ

ಬದುಕಿಗೆ ವಿದಾಯ ಹೇಳುವುದಾಗಿ ವಾಟ್ಸಾಪ್ ನಲ್ಲಿ ಸಂದೇಶ ಹಾಕಿ ಸರ್ಕಾರಿ ನೌಕರ ನಾಪತ್ತೆ

ಶಿವಮೊಗ್ಗ: ಡೆತ್ ನೋಟ್ ಬರೆದಿಟ್ಟು ಶಿವಮೊಗ್ಗದಲ್ಲಿ ಸರ್ಕಾರಿ ನೌಕರರು ನಾಪತ್ತೆಯಾಗಿದ್ದಾರೆ. ಎನ್‌ಪಿಎಸ್ ನೌಕರರ ಸಂಘದ ಶಿವಮೊಗ್ಗ ತಾಲೂಕು ಘಟಕದ ಅಧ್ಯಕ್ಷ ಪ್ರಭಾಕರ್ ನಾಪತ್ತೆಯಾದವರು.

ಬದುಕಿಗೆ ವಿದಾಯ ಹೇಳುವುದಾಗಿ ವಾಟ್ಸಾಪ್ ನಲ್ಲಿ ಸಂದೇಶ ಹಾಕಿ ಅವರು ನಾಪತ್ತೆಯಾಗಿದ್ದಾರೆ. ಅವರ ಪತ್ನಿ ಶಿವಮೊಗ್ಗದ ಕೋಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಶಿವಮೊಗ್ಗ ನಗರದ ಸೋಮಯ್ಯ ಲೇಔಟ್ ಮನೆಯಿಂದ ಬುಧವಾರ ಬೆಳಗ್ಗೆ 7:45 ರಿಂದ ಪ್ರಭಾಕರ್ ನಾಪತ್ತೆಯಾಗಿದ್ದಾರೆ. ಆರು ತಿಂಗಳ ಹಿಂದೆ ಎಫ್.ಡಿ.ಎ. ಹುದ್ದೆಯಿಂದ ಎಸ್.ಡಿ.ಎ. ಹುದ್ದೆಗೆ ಹಿಂಬಡ್ತಿ ನೀಡಲಾಗಿತ್ತು. ಆರು ತಿಂಗಳಿನಿಂದ ಸಂಬಳ ಕೂಡ ಆಗಿರಲಿಲ್ಲ. ಇದರಿಂದ ಅವರು ಮನನೊಂದಿದ್ದರು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರು ವಾಟ್ಸಾಪ್ ನಲ್ಲಿ ಕಳುಹಿಸಿದ ಸಂದೇಶದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಸೇರಿದಂತೆ ಹಲವರ ಹೆಸರು ಉಲ್ಲೇಖಿಸಲಾಗಿದೆ. ಮೆಸೇಜ್ ಮಾಡಿದ ನಂತರ ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular