HomeKarnatakaಹೈಕೋರ್ಟ್ ನಲ್ಲಿ ಕೋರ್ಟ್ ಹಾಲ್ ಕೊರತೆ: ಹೆಚ್ಚುವರಿ ಸ್ಥಳಾವಕಾಶ ಒದಗಿಸಲು ಕ್ರಮಕ್ಕೆ ಸರ್ಕಾರಕ್ಕೆ ಸೂಚನೆ

ಹೈಕೋರ್ಟ್ ನಲ್ಲಿ ಕೋರ್ಟ್ ಹಾಲ್ ಕೊರತೆ: ಹೆಚ್ಚುವರಿ ಸ್ಥಳಾವಕಾಶ ಒದಗಿಸಲು ಕ್ರಮಕ್ಕೆ ಸರ್ಕಾರಕ್ಕೆ ಸೂಚನೆ

ಬೆಂಗಳೂರು: ಹೈಕೋರ್ಟ್ ನಲ್ಲಿ ಕೋರ್ಟ್ ಹಾಲ್ ಗಳ ಕೊರತೆ ಉಂಟಾಗಿದೆ. ಪ್ರಕರಣಗಳ ದಾಖಲಾತಿ ಮತ್ತು ನ್ಯಾಯಾಂಗ ನೇಮಕಾತಿ ಹೆಚ್ಚಳ ಆಗುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಪ್ರಧಾನ ಪೀಠದ ಕಛೇರಿ ಮತ್ತು ನ್ಯಾಯಮೂರ್ತಿಗಳಿಗೆ ಕೊಠಡಿ ಮತ್ತು ಕೋರ್ಟ್ ಹಾಲ್ ಗಳಿಗೆ ಹೆಚ್ಚುವರಿ ಸ್ಥಳಾವಕಾಶ ಒದಗಿಸಲು ಸಮಗ್ರ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ತುಮಕೂರಿನ ವಕೀಲ ರಮೇಶ್ ನಾಯಕ್ ಅವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೈಕೋರ್ಟ್ ಪ್ರಧಾನ ಪೀಠದ ಕಚೇರಿ, ನ್ಯಾಯಮೂರ್ತಿಗಳ ಕೊಠಡಿ ಮತ್ತು ಕೋರ್ಟ್ ಹಾಲ್ ಗಳಿಗೆ ಹೆಚ್ಚುವರಿ ಸ್ಥಳ ಒದಗಿಸುವ ಸಂಬಂಧ ಸಮಗ್ರ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸಲು ಸೂಚನೆ ನೀಡಿದ್ದು, ವಿಚಾರಣೆಯನ್ನು ಮೂರು ವಾರ ಮುಂದೂಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular