ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್ನಲ್ಲಿ ಅತ್ಯಧಿಕ ಫಾಲೋವರ್ಸ್ ಹೊಂದಿದ್ದು, ಅವರ ಟ್ವಿಟ್ಟರ್ ಫಾಲೋವರ್ಸ್ ಸಂಖ್ಯೆ 90 ಮಿಲಿಯನ್ ದಾಟಿದೆ.
ಹೌದು, ಅಮೆರಿಕ ಅಧ್ಯಕ್ಷ ಜೋ ಬೈಡನ್ 37.7 ಮಿಲಿಯನ್ ಫಾಲೋವರ್ಸ್ ಹೊಂದಿದ್ದರೆ, ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ 2 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಟ್ವಿಟ್ಟರ್ ಫಾಲೋವರ್ಸ್ ಸಂಖ್ಯೆ 90 ಮಿಲಿಯನ್ ದಾಟಿದೆ.
ಪ್ರಧಾನಿ ಮೋದಿ ತಮ್ಮ ವೈಯಕ್ತಿಕ ಖಾತೆಯಲ್ಲಿ ಇದೀಗ 90 ಮಿಲಿಯನ್ ಅಂದರೆ 9 ಕೋಟಿಗೂ ಅಧಿಕ ಫಾಲೋವರ್ಸ್ ಹೊಂದಿದ್ದಾರೆ. ಆ ಮೂಲಕ ಟ್ವಿಟರ್ನ ಅತ್ಯಧಿಕ ಫಾಲೋವರ್ಸ್ ಹೊಂದಿರುವ ಖಾತೆಗಳ ಟಾಪ್-10 ಪಟ್ಟಿಯಲ್ಲೂ ಅವರು ಸ್ಥಾನ ಹೊಂದಿದ್ದಾರೆ. ಮೋದಿ ಅವರು ಗುಜರಾತ್ ಸಿಎಂ ಆಗಿದ್ದಾಗ 2009 ರಲ್ಲಿ ಟ್ವಿಟರ್ನಲ್ಲಿ ಖಾತೆ ಆರಂಭಿಸಿದ್ದರು. ಒಂದು ವರ್ಷದೊಳಗೆ ಅವರಿಗೆ ಒಂದು ಲಕ್ಷ ಫಾಲೋವರ್ಸ್ ಆದರು. 86.6 ಮಿಲಿಯನ್ ಫಾಲೋಯರ್ಸ್ ಹೊಂದಿರುವ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು 84.1 ಮಿಲಿಯನ್ ಫಾಲೋವರ್ಸ್ ಹೊಂದಿರುವ ಅಮೆರಿಕದ ಗಾಯಕಿ ಮತ್ತು ನಟಿ ಲೇಡಿ ಗಾಗಾ ಅವರನ್ನು ಮೋದಿ ಹಿಂದಿಕ್ಕಿದ್ದಾರೆ. ಸದ್ಯ, ಅವರ ಟ್ವಿಟ್ಟರ್ ಫಾಲೋವರ್ಸ್ ಸಂಖ್ಯೆ 90 ಮಿಲಿಯನ್ ದಾಟಿದೆ.