ನವದೆಹಲಿ : ಮಣಿಪುರದಲ್ಲಿ ಮೇ 4 ರಂದು ಆಘಾತಕಾರಿ ಘಟನೆ ನಡೆದಿದ್ದು, ಕುಕಿ ಸಮುದಾಯಕ್ಕೆ ಸೇರಿದ ಇಬ್ಬರು ಮಣಿಪುರಿ ಮಹಿಳೆಯರ ಲೈಂಗಿಕ ದೌರ್ಜನ್ಯ ನಡೆಸಿ, ಬೆತ್ತಲೆ ಮೆರವಣಿಗೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿಂತೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.
ಸಂಸತ್ ಭವನದ ಬಳಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮಣಿಪುರ ಘಟನೆಯಿಂದ ತುಂಬಾ ನೋವುಂಟು ಮಾಡಿದೆ. ಇದು ಇಡಿ ಸಮಾಜ ತಲೆತಗ್ಗಿಸುವ ವಿಚಾರ. ಇದರಿಂದ ಮಹಿಳೆಯರ ಘನತೆ, ಗೌರವಕ್ಕೆ ಧಕ್ಕೆಯಾಗಿದೆ ಎಂದು ಹೇಳಿದ್ದಾರೆ.
ಘಟನೆ ಸಂಬಂಧ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಹೆರದಾಸ್ (32) ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.
ಮಣಿಪುರ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಶೇರ್ ಮಾಡದಂತೆ ಆದೇಶ ಹೊರಡಿಸಿದೆ.
ಈ ವಿಷಯವು ಪ್ರಸ್ತುತ ತನಿಖೆಯಲ್ಲಿದೆ, ಮತ್ತು ಈ ಪರಿಸ್ಥಿತಿಯಲ್ಲಿ ಭಾರತೀಯ ಕಾನೂನುಗಳನ್ನು ಅನುಸರಿಸುವುದು ಕಡ್ಡಾಯ ಎಂದು ಸರ್ಕಾರ ಹೇಳಿದೆ. ಮಣಿಪುರದ ಇಬ್ಬರು ಮಹಿಳೆಯರ ಮೇಲೆ ರಸ್ತೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೀಡಿಯೊ ಒಂದು ದಿನದ ಹಿಂದೆ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.