HomeKarnataka‘ಶಕ್ತಿ ಯೋಜನೆ’ ಎಫೆಕ್ಟ್ : ಜು.27 ರಂದು ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದ ...

‘ಶಕ್ತಿ ಯೋಜನೆ’ ಎಫೆಕ್ಟ್ : ಜು.27 ರಂದು ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದ ಖಾಸಗಿ ಸಾರಿಗೆ ಸಂಘಟನೆ ಒಕ್ಕೂಟ

ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆ ನೀಡಿದ ರಾಜ್ಯ ಸರ್ಕಾರದ  ‘ಶಕ್ತಿ ಯೋಜನೆ’ ವಿರುದ್ಧ ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆಗಳು  ಸಿಡಿದೆದ್ದಿದ್ದು,  ಜುಲೈ 27 ರಂದು ರಾಜ್ಯಾದ್ಯಂತ  ಬಂದ್ ಗೆ ಕರೆ ನೀಡಿದೆ.

ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಸಂಘಟನೆಗಳು ಸಿಡಿದೆದ್ದಿದ್ದು,  ಈ ಹಿನ್ನೆಲೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಜುಲೈ 27 ರಂದು ಬಂದ್ ಗೆ ಕರೆ ನೀಡಿದೆ. ಸಾರಿಗೆ ಸಂಘಟನೆ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕೂಡ ಬೆಂಬಲ ನೀಡಿದೆ.

ಖಾಸಗಿ ಬಸ್, ಟ್ಯಾಕ್ಸಿ ಮತ್ತು ಆಟೋ ಸಂಘಟನೆಗಳು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದು, ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರದ ಗಮನ ಸೆಳೆಯಲಿದೆ. ಅಂದು ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಸಂಚಾರ ಅನುಮಾನ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಕಷ್ಟದಲ್ಲಿರುವ ಚಾಲಕರಿಗೆ ಸರ್ಕಾರ ಪ್ರತಿ ತಿಂಗಳು 10 ಸಾವಿರ ರೂ. ಪರಿಹಾರ ನೀಡಬೇಕು. ಎಂದು ಬೆಂಗಳೂರು ಆಟೋರಿಕ್ಷಾ ಚಾಲಕರ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ. ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಸೌಕರ್ಯ ಕಲ್ಪಿಸಿರುವುದರಿಂದ ಆಟೋ ಚಾಲಕರು ನಷ್ಟಕ್ಕೆ ಒಳಗಾಗಿದ್ದಾರೆ. ಸರ್ಕಾರ ಭರವಸೆ ನೀಡಿದ್ದಂತೆ ರ್ಯಾಪಿಡ್ ಬೈಕ್ ಟ್ಯಾಕ್ಸಿ ನಿಷೇಧಿಸಬೇಕು, ಅಸಂಘಟಿತ ವಾಣಿಜ್ಯ ಚಾಲಕರಿಗಾಗಿ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು. ಎಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ರಹದಾರಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಉಚಿತ ಪ್ರಯಾಣ ಯೋಜನೆಯಿಂದ ನಮಗೆ ಬಹಳ ತೊಂದರೆಯಾಗಿದೆ. ಮೊದಲು ನಮಗೆ ಮಹಿಳಾ ಪ್ರಯಾಣಿಕರು ಹೆಚ್ಚಿರುತ್ತಿದ್ದರು. ಆದರೆ ಸರ್ಕಾರ ಉಚಿತ ಬಸ್ ಸೇವೆ ಕೊಟ್ಟ ಮೇಲೆ ಯಾರೂ ಆಟೋ ಹತ್ತುತ್ತಿಲ್ಲ. ಸರ್ಕಾರಿ ಬಸ್ ಗಳು ರಶ್ ಆಗಿ ಓಡಾಡುತ್ತಿದೆ, ಆದರೆ ಆಟೋ ಖಾಲಿಯಾಗಿ ಓಡಾಡುತ್ತಿದೆ.ಆಟೋ ಚಾಲಕರ ಸಮಸ್ಯೆ ಬಗೆಹರಿಸದೇ ಇದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular