HomeKarnatakaBIG NEWS : ಶಂಕಿತ ಉಗ್ರ ಜಾಹಿದ್ ತಬ್ರೇಜ್ ನಿವಾಸದಲ್ಲಿ 4 ಗ್ರೆನೇಡ್ ಗಳು ಪತ್ತೆ...

BIG NEWS : ಶಂಕಿತ ಉಗ್ರ ಜಾಹಿದ್ ತಬ್ರೇಜ್ ನಿವಾಸದಲ್ಲಿ 4 ಗ್ರೆನೇಡ್ ಗಳು ಪತ್ತೆ : ಸಿಸಿಬಿ ಜಂಟಿ ಆಯುಕ್ತ ಶರಣಪ್ಪ

ಬೆಂಗಳೂರು : ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ.

ಶಂಕಿತ ಉಗ್ರ ಜಾಹಿದ್ ತಬ್ರೇಜ್ ನಿವಾಸದಲ್ಲಿ 4 ಗ್ರೆನೇಡ್ಗಳು ಪತ್ತೆಯಾಗಿದೆ ಎಂದು ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ಹೇಳಿದ್ದಾರೆ.  ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಸಿಬಿ ಜಂಟಿ ಆಯುಕ್ತ ಶರಣಪ್ಪ  ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿರುವ ನಿವಾಸದಲ್ಲಿ ಕೆಮಿಕಲ್ ಹಾಗೂ ಮರಳು ತುಂಬಿದ್ದ ಚೀಲದಲ್ಲಿ ಗ್ರೆನೇಡ್ ಪತ್ತೆಯಾಗಿದೆ. ಬಂಧಿತ  5 ನೇ ಆರೋಪಿ ಜಾಹಿದ್ ತಬ್ರೇಜ್ ಮನೆಯ ಬೀರುವಿನಲ್ಲಿ ಗ್ರೆನೇಡ್ ಪತ್ತೆಯಾಗಿದೆ. ಸದ್ಯ ಅದನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ಹೇಳಿದ್ದಾರೆ.  5  ಮಂದಿ  ಆರೋಪಿಗಳನ್ನು ಬಂಧಿಸಿ  ವಿಚಾರಣೆ ನಡೆಸಲಾಗುತ್ತಿದ್ದು,  ಅವರಿಂದ ಹೇಳಿಕೆಗಳನ್ನ ಪಡೆಯಲಾಗುತ್ತಿದೆ ಎಂದರು.

ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಎನ್ ಐ ಎ ವಿಶೇಷ ಕೋರ್ಟ್ ಐವರು ಶಂಕಿತ ಉಗ್ರರನ್ನು ಏಳು ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. 15 ದಿನ ತಮ್ಮ ವಶಕ್ಕೆ ನೀಡುವಂತೆ ಸಿಸಿಬಿ ಮನವಿ ಮಾಡಿಕೊಂಡಿತ್ತು, ಆದರೆ ಕೋರ್ಟ್ 7 ದಿನ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಬೆಂಗಳೂರಿನ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ 7 ಶಂಕಿತ ಉಗ್ರರ ಪೈಕಿ ಐವರನ್ನು ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಆರೋಪಿ ನಂಬರ್-1 ನಜೀರ್ ಹಾಗೂ ಆರೋಪಿ ನಂಬರ್ 2 ಸದ್ಯ ಪರಾರಿಯಾಗಿದ್ದು, 3 ಸುಹೇಲ್, 4 ಉಮರ್, 5, ಜಾಹೀದ್, 6 ಮುದಾಸಿರ್, ಫೈಜಲ್ ಆರೆಸ್ಟ್ ಆಗಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular