HomeKarnatakaವಿಪಕ್ಷದವರಿಲ್ಲದೇ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಿರುವುದು ಇದೇ ಮೊದಲು : ಸಿಎಂ ಸಿದ್ದರಾಮಯ್ಯ

ವಿಪಕ್ಷದವರಿಲ್ಲದೇ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಿರುವುದು ಇದೇ ಮೊದಲು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಪಕ್ಷದವರು ಇಲ್ಲದೇ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಿರುವುದು ಇದೇ ಮೊದಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ ನಿನ್ನೆ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಅಸಭ್ಯ ವರ್ತನೆಗೆ ಗರಂ ಆಗಿ ಮಾತನಾಡಿದ್ದಾರೆ. ನಾನು 14 ಬಜೆಟ್ ಮಂಡಿಸಿದ್ದೇನೆ. ಇದೇ ಮೊದಲ ಸಲ ವಿಪಕ್ಷದವರು ಒಬ್ಬರೂ ಇಲ್ಲದ ಸಮಯದಲ್ಲಿ ಉತ್ತರ ಕೊಡುತ್ತಿದ್ದೇನೆ ಎಂದರು.

ವಿಪಕ್ಷ ನಾಯಕ ಇಲ್ಲದೇ ಮೊದಲ ಸಲ ಬಜೆಟ್ ಅಧಿವೇಶನ ನಡೆದಿದೆ. ಬಿಜೆಪಿಗೆ ಒಬ್ಬ ವಿಪಕ್ಷ ನಾಯಕನ ಆಯ್ಕೆ ಮಾಡಿಕೊಳ್ಳಲು ಆಗಿಲ್ಲ ಅಂದರೆ ಅದು ಪ್ರಜಾಪ್ರಭುತ್ವಕ್ಕೆ ಮಾರಕ. ಬಿಜೆಪಿಯವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಗಳ ಮೇಲೆ ನಂಬಿಕೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಬಿಜೆಪಿ ಯಾವಾಗಲೂ ವಿಪಕ್ಷವಾಗಿಯೇ ಇರಬೇಕು. ಬಿಜೆಪಿಯ ಅವನತಿ ಕರ್ನಾಟಕದಿಂದ ಶುರುವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular