ಮಡಿಕೇರಿ : ಕೊಡಗು ಜಿಲ್ಲೆಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2022-23 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ, 31 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸದೇ ಇರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ www.ssp.postmatric.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ದಾಖಲೆಗಳಾದ ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ(ಆದಾಯದ ಮಿತಿ 2.50 ಲಕ್ಷ ಆದಾಯ ಮಿತಿಗೊಳಿಸಲಾಗಿದೆ), ವಿದ್ಯಾರ್ಥಿಯ ಬ್ಯಾಂಕ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್(ಕಡ್ಡಾಯವಾಗಿ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಮತ್ತು ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿಸಿರಬೇಕು), ಹಿಂದಿನ ವರ್ಷದ ಅಂಕಪಟ್ಟಿ ಪ್ರತಿ, ಇತ್ತೀಚಿನ ಭಾವಚಿತ್ರ ಹಾಗೂ ಅಧ್ಯಯನ/ ಬೋನಾಪೈಡ್ ಪ್ರಮಾಣ ಪತ್ರ ಕಡ್ಡಾಯವಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ 08274-261261, ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ 08272-223552 ಹಾಗೂ ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ 08276-281115 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಅವರು ತಿಳಿಸಿದ್ದಾರೆ.