HomeIndiaಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಗುಡ್ ನ್ಯೂಸ್: 1 ಕೋಟಿಗೂ ಅಧಿಕ ಮನೆ ನಿರ್ಮಾಣ

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಗುಡ್ ನ್ಯೂಸ್: 1 ಕೋಟಿಗೂ ಅಧಿಕ ಮನೆ ನಿರ್ಮಾಣ

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ(PMAY) 2024 ರ ಅಂತ್ಯದ ವೇಳೆಗೆ ಒಂದು ಕೋಟಿಗೂ ಹೆಚ್ಚು ಮನೆಗಳನ್ನು ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಲೋಕಸಭೆಗೆ ಲಿಖಿತ ಉತ್ತರ ನೀಡಿದ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಲ್ ಕಿಶೋರ್, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮುಂದಿನ ವರ್ಷದ ಅಂತ್ಯದ ವೇಳೆಗೆ ಒಂದು ಕೋಟಿಗೂ ಹೆಚ್ಚು ಮನೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ. ಈ ತಿಂಗಳ 10 ರವರೆಗೆ 118 ಲಕ್ಷ ಮನೆಗಳನ್ನು ಮಂಜೂರು ಮಾಡಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರಲ್ಲಿ 1,12,22,000 ಮನೆಗಳ ನಿರ್ಮಾಣಕ್ಕೆ ಗ್ರೌಂಡ್ ಮಾಡಲಾಗಿದ್ದು, 75,31,000 ಸಾವಿರ ಮನೆಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ತಲುಪಿಸಲಾಗಿದೆ. ಈ ಆರ್ಥಿಕ ವರ್ಷದಲ್ಲಿ ಯೋಜನೆಯಡಿ 28 ಸಾವಿರ ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular