alex Certify ‘ಶಕ್ತಿ ಯೋಜನೆ’ ಎಫೆಕ್ಟ್ : ಜು.27 ರಂದು ಆಟೋ, ಕ್ಯಾಬ್, ಖಾಸಗಿ ಬಸ್ ಗಳ ಮುಷ್ಕರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಶಕ್ತಿ ಯೋಜನೆ’ ಎಫೆಕ್ಟ್ : ಜು.27 ರಂದು ಆಟೋ, ಕ್ಯಾಬ್, ಖಾಸಗಿ ಬಸ್ ಗಳ ಮುಷ್ಕರ

ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆ ನೀಡಿದ ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ವಿರುದ್ಧ ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆಗಳು ಸಿಡಿದೆದ್ದಿದ್ದು, ಜುಲೈ 27 ರಂದು ಮುಷ್ಕರಕ್ಕೆ ಕರೆ ನೀಡಿದೆ.

‘ಶಕ್ತಿ’ ಯೋಜನೆಯಿಂದ ಆಗಿರುವ ತೊಂದರೆ ಪರಿಹರಿಸುವಂತೆ ಒತ್ತಾಯಿಸಿ ಜು.27 ರಂದು ನಗರದಲ್ಲಿ ಆಟೋರಿಕ್ಷಾ, ಖಾಸಗಿ ಬಸ್, ಓಲಾ- ಊಬರ್, ಮ್ಯಾಕ್ಸಿಕ್ಯಾಬ್ಗಳ ಮಾಲೀಕ, ಚಾಲಕರು ಸಂಚಾರ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆ ಪ್ರಯಾಣಿಕರಿಗೆ ತೊಂದರೆ ಆಗಲಿದೆ.

ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಆಟೋರಿಕ್ಷಾ ಸೇರಿ ಸಾರ್ವ ಜನಿಕ ಸೇವೆಯ ಖಾಸಗಿ ವಾಹನ ಚಾಲಕರಿಗೆ ಮಾಸಿಕ 10 ಸಾವಿರ ಪರಿಹಾರಕ್ಕೆ ಒತ್ತಾಯಿಸಿ ರಾಯಣ್ಣ ವೃತ್ತದಿಂದ ನಗರದಲ್ಲಿ ಸಾವಿರಾರು ಚಾಲಕರು ಸೇರಿ ರ್ಯಾಲಿ ನಡೆಸಿ, ಸ್ವಾತಂತ್ರ್ಯ ಉದ್ಯಾನದಲ್ಲಿ ಸಂಜೆ 7 ಗಂಟೆವರೆಗೆ ಧರಣಿ ನಡೆಸಲು ನಿರ್ಧಾರ ಮಾಡಿರುವುದಾಗಿ ಖಾಸಗಿ ಸಾರಿಗೆ ಸಂಘಟನೆಗಳು ಘೋಷಿಸಿದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಜುಲೈ 27 ರಂದು ಬಂದ್ ಗೆ ಕರೆ ನೀಡಿದೆ. ಸಾರಿಗೆ ಸಂಘಟನೆ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕೂಡ ಬೆಂಬಲ ನೀಡಿದೆ.

ಖಾಸಗಿ ಬಸ್, ಟ್ಯಾಕ್ಸಿ ಮತ್ತು ಆಟೋ ಸಂಘಟನೆಗಳು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದು, ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರದ ಗಮನ ಸೆಳೆಯಲಿದೆ. ಅಂದು ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಸಂಚಾರ ಅನುಮಾನ ಎನ್ನಲಾಗಿದೆ.ಸಂಕಷ್ಟದಲ್ಲಿರುವ ಚಾಲಕರಿಗೆ ಸರ್ಕಾರ ಪ್ರತಿ ತಿಂಗಳು 10 ಸಾವಿರ ರೂ. ಪರಿಹಾರ ನೀಡಬೇಕು. ಎಂದು ಬೆಂಗಳೂರು ಆಟೋರಿಕ್ಷಾ ಚಾಲಕರ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ. ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಸೌಕರ್ಯ ಕಲ್ಪಿಸಿರುವುದರಿಂದ ಆಟೋ ಚಾಲಕರು ನಷ್ಟಕ್ಕೆ ಒಳಗಾಗಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...