ಬೆಂಗಳೂರು : ಕುರುಬ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಎಸ್ ಟಿ ( ಪರಿಶಿಷ್ಟ ಪಂಗಡ) ಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಿದೆ.
ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಶಿಫಾರಸು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ ಮಣಿವಣ್ಣನ್ ಅವರು ತಿಳಿಸಿದ್ದಾರೆ. ಮೈಸೂರಿನಲ್ಲಿ ಬುಡಕಟ್ಟು ಸಂಶೋಧನಾ ಸಂಸ್ಥೆ ನಡೆಸಿದ ಕುಲಶಾಸ್ತ್ರೀಯ ಅಧ್ಯಯನದ ವರದಿಯನ್ನು ಶಿಫಾರಸು ಪತ್ರದ ಜೊತೆ ಲಗತ್ತಿಸಲಾಗಿದೆ.
ಈ ಹಿಂದೆ ಕಾಡು ಕುರುಬರನ್ನು ಮಾತ್ರವೇ ಎಸ್ಟಿ ಪಂಗಡಕ್ಕೆ ಸೇರಿಸಲಾಗಿತ್ತು. ನಂತರ 2020-21ರಲ್ಲಿ ರಾಜ್ಯಾದ್ಯಂತ ಎಲ್ಲಾ ಕುರುಬ ಸಮುದಾಯದವರನ್ನು ಎಸ್ಟಿ ಸಮುದಾಯಕ್ಕೆ ಸೇರಿಸುವಂತೆ ನಿರಂಜನಾನಂದ ಪುರಿ ಸ್ವಾಮೀಜಿ ಹಾಗೂ ಸಮುದಾಯದ ಮುಖಂಡರು ಬೃಹತ್ ಪಾದಯಾತ್ರೆ ನಡೆಸಿದ್ದರು. ಈಗ ರಾಜ್ಯಾದ್ಯಂತ ಎಲ್ಲಾ ಕುರುಬರನ್ನು ಎಸ್ ಟಿ ( ಪರಿಶಿಷ್ಟ ಪಂಗಡ) ಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಿದ್ದು, ಈ ಮೂಲಕ ಕುರುಬ ಸಮುದಾಯಕ್ಕೆ ಗುಡ್ ನ್ಯೂಸ್ ಸಿಕ್ಕಂತಾಗಿದೆ.