BIG NEWS: ಕುಸಿದು ಬಿದ್ದ ಸಾರ್ವಜನಿಕ ಶೌಚಾಲಯ; ಮೂವರು ಮಹಿಳೆಯರಿಗೆ ಗಂಭೀರ ಗಾಯ

ವಿಜಯಪುರ: ರಾಜ್ಯದ ಹಲವೆಡೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ವರುಣಾರ್ಭಟ ಜೋರಾಗಿದೆ. ಈ ನಡುವೆ ವಿಜಯಪುರ ಜಿಲ್ಲೆಯಲ್ಲಿ ಅವಘಡವೊಂದು ಸಂಭವಿಸಿದೆ.

ಭಾರಿ ಮಳೆಯಿಂದಾಗಿ ಸಾರ್ವಜನಿಕ ಶೌಚಾಲಯ ಕುಸಿದು ಬಿದ್ದ ಪರಿಣಾಮ ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಜುಮನಾಳದಲ್ಲಿ ಈ ಘಟನೆ ನಡೆದಿದೆ.

ಕಮಲಾಬಾಯಿ ಬಗಲಿ, ಮುಸ್ಕಾನ್, ಮುರ್ತುಜಭಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ನಿರಂತರವಾಗಿ ಸುರಿಯುತ್ತಿರುವ ಜಿಟಿ ಜಿಟಿ ಮಳೆಯಿಂದಾಗಿ ಶೌಚಾಲಯ ಕುಸಿದು ಬಿದ್ದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read