
ಹತ್ಯೆಯಾದ ರೌಡಿಶೀಟರ್ನನ್ನು ಮುಜಾಯಿದ್ದೀನ್ (32) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಮನೆಯಿಂದ ಹೊರಗಡೆ ಬಂದು ಗೇಟ್ ಬಳಿ ನಿಂತಿದ್ದ ವೇಳೆ ದಾಳಿ ನಡೆಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಗಂಭೀರವಾಗಿ ಗಾಯಗೊಂಡ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

