HomeKarnatakaRain alert : ಕಲಬುರ್ಗಿ, ಬೀದರ್ ಸೇರಿ ನಾಲ್ಕು ಜಿಲ್ಲೆಗಳಲ್ಲಿ 'ಯೆಲ್ಲೋ ಅಲರ್ಟ್' ಘೋಷಣೆ

Rain alert : ಕಲಬುರ್ಗಿ, ಬೀದರ್ ಸೇರಿ ನಾಲ್ಕು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ವರುಣಾರ್ಭಟ ಜೋರಾಗಿದ್ದು, ಇನ್ನೂ ಐದು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿಯೂ ಮಳೆ ಮುಂದುವರೆಯಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ .

For Latest News Updates, Join Our Whatsapp Community🚩
RELATED ARTICLES

Most Popular