ನವದೆಹಲಿ : ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆ ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಒಳಗಾಗಿ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಗುಜರಾತ್ ಹೈಕೋರ್ಟ್ ನಲ್ಲಿ ಹಿನ್ನಡೆಯಾಗಿದ್ದು, ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
ಜುಲೈ 21 ರಂದು ಇಂದು ಸುಪ್ರೀಂಕೋರ್ಟ್ ನಲ್ಲಿ ರಾಹುಲ್ ಗಾಂಧಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆದಿದ್ದು, ವಿಚಾರಣೆಯನ್ನು ಆಗಸ್ಟ್ 4 ಕ್ಕೆ ಮುಂದೂಡಿದೆ.
2019 ರಲ್ಲಿ ಮೋದಿ ಸರ್ನೇಮ್ ಕುರಿತಾದ ವಿವಾದಾತ್ಮಕ ಹೇಳಿಕೆ ವಿರುದ್ಧದ ಮಾನಹಾನಿ ಪ್ರಕರಣದಲ್ಲಿ ತಮಗೆ ವಿಧಿಸಿರುವ ಶಿಕ್ಷೆಯನ್ನು ತಡೆ ಹಿಡಿಯಬೇಕು ಎಂದು ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿತ್ತು, ಇದರಿಂದ ಲೋಕಸಭಾ ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅವರ ಅನರ್ಹತೆ ಮುಂದುವರೆದಿದ್ದು, ಈ ವಿಚಾರವಾಗಿ ರಾಹುಲ್ ಗಾಂಧಿ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ . .