ಬೆಂಗಳೂರು : ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿದೆ ಎಂದು ಟ್ವಿಟರ್ ನಲ್ಲಿ ಕಾಂಗ್ರೆಸ್ ಲೇವಡಿ ಮಾಡಿದೆ.
ಬಿಜೆಪಿಗೆ ಮಾಜಿ ಸಿಎಂ ಕುಮಾರಸ್ವಾಮಿ ಸಾಥ್ ನೀಡಿರುವ ವಿಚಾರಕ್ಕೆ ಕಾಂಗ್ರೆಸ್ ಟ್ವೀಟ್ ನಲ್ಲಿ ವ್ಯಂಗ್ಯವಾಡಿದೆ. ಹೊಸ ರಾಜಕೀಯ ಸಮ್ಮಿಶ್ರಣವೊಂದು ತಯಾರಾಗುತ್ತಿದೆ. ಈಗ ನಮಗಿರುವ ಪ್ರಶ್ನೆ, ಜೆಡಿಎಸ್ ಕೋಮುವಾದವನ್ನು ಅಳವಡಿಸಿಕೊಳ್ಳುತ್ತದೆಯೇ ಅಥವಾ ಬಿಜೆಪಿ ಜಾತ್ಯತೀತತೆಯನ್ನು ಅಳವಡಿಸಿಕೊಳ್ಳುತ್ತದೆಯೇ? ಬೆಳವಣಿಗೆಗಳನ್ನು ನೋಡುತ್ತಿದ್ದರೆ ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವುದು ಕಾಣುತ್ತಿದೆ, ಥೇಟ್. ನಾಗವಲ್ಲಿಯ ತರ!! ಎಂದು ಕಾಂಗ್ರೆಸ್ ಜೆಡಿಎಸ್ ಕಾಲೆಳೆದಿದೆ.
ಇನ್ನೊಂದು ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದ ಕಾಂಗ್ರೆಸ್ ಹಲವು ಆರೋಪ ಮಾಡಿದೆ. ಬಿಜೆಪಿಗೆ ದಲಿತರ ರಾಜಕೀಯ ಹಾಗೂ ಸಾಮಾಜಿಕ ಏಳಿಗೆಯನ್ನು ಸಹಿಸಲಾಗುತ್ತಿಲ್ಲವೇ? ದಲಿತರ ತಲೆ ಮೇಲೆ ಚಡ್ಡಿ ಹೊರಿಸಿತ್ತು ಬಿಜೆಪಿ. SCP/TSP ಹಣವನ್ನು ದುರುಪಯೋಗ ಮಾಡಿತ್ತು, ಬಿಜೆಪಿ ದಲಿತರಿಗೆ ಮಾತ್ರ ಚಪ್ಪಲಿ ಕಾಯುವ ಟೆಂಡರ್ ಮೀಸಲಿಟ್ಟಿತ್ತು ಹಾಗೂ ಬಿಜೆಪಿ ಸೆಂಟ್ರಲ್ ವಿಸ್ತಾ, ರಾಮಮಂದಿರದ ಕಾರ್ಯಕ್ರಮಕ್ಕೆ ದಲಿತ ಸಮುದಾಯದ ರಾಷ್ಟ್ರಪತಿಗೆ ಆಹ್ವಾನಿಸಲಿಲ್ಲ ಬಿಜೆಪಿ ಈಗ ದಲಿತ ಸಮುದಾಯದ ಉಪಸಭಾಪತಿಯ ಮುಖಕ್ಕೆ ಪೇಪರ್ ಎಸೆದು ಅವಮಾನಿಸಿದೆ. ದಲಿತರನ್ನು ಬಿಜೆಪಿ ಏಕಿಷ್ಟು ಕೇವಲವಾಗಿ ಕಾಣುತ್ತಿದೆ? ಮನುವಾದವೇ ಬಿಜೆಪಿಯ ಪಕ್ಷದ ಬೈಲಾ ಆಗಿದೆಯೇ? ಎಂದು ಕಾಂಗ್ರೆಸ್ ಕಿಡಿಕಾರಿದೆ.