HomeKarnatakaBIG NEWS: NDA ಗೂ ಸೇರಲ್ಲ; UPAಗೂ ಸೇರಲ್ಲ; ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸ್ಪಷ್ಟನೆ

BIG NEWS: NDA ಗೂ ಸೇರಲ್ಲ; UPAಗೂ ಸೇರಲ್ಲ; ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸ್ಪಷ್ಟನೆ

ಬೆಂಗಳೂರು: ವಿಪಕ್ಷ ನಾಯಕರ ಮೈತ್ರಿಕೂಟದ ಸಭೆಗೆ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಹೋರಾಟ ನಡೆಸಿದ್ದು, ಈ ಬಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ದೇವೇಗೌಡ, ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ಭಾಗಿಯಾಗಿರುವ ವಿಚಾರವಾಗಿ, ಹೆಚ್.ಡಿ.ಕೆ ಟ್ವೀಟ್ ನೋಡಿ ಬಿಜೆಪಿಯಿಂದ ಹೋರಾಟ ಆರಂಭವಾಗಿದೆ. ಹಾಗಾಗಿ ಹೆಚ್.ಡಿ.ಕೆ ಹೋರಾಟವನ್ನು ಬೆಂಬಲಿಸಿದ್ದಾರೆ ಅಷ್ಟೇ. ಇದರಲ್ಲಿ ಬೇರಾವ ರಾಜಕೀಯ ಬೆರೆಸುವ ಅಗತ್ಯವಿಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ ಎನ್ ಡಿ ಎ ಜೊತೆ ಜೆಡಿಎಸ್ ಮೈತ್ರಿ ಕುರಿತ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು, ಎನ್ ಡಿ ಎಗೂ ಸೇರಲ್ಲ ಯುಪಿಎ ಗೂ ಸೇರಲ್ಲ. ನಾವು ಸ್ವತಂತ್ರವಾಗಿ ಹೋರಾಟ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

 

For Latest News Updates, Join Our Whatsapp Community🚩
RELATED ARTICLES

Most Popular