ವಾರಣಾಸಿ: ಕಾಶಿ ವಿಶ್ವನಾಥ ಮಂದಿರದ ಪಕ್ಕದಲ್ಲಿರುವ ಜ್ಞನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ವಾರಣಾಸಿ ಜಿಲ್ಲಾ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.
ಜ್ಞಾನವಾಪಿ ಮಸೀದಿ ಒಳಗೆ ವೈಜ್ಞಾನಿಕ ಸಮೀಕ್ಷೆ ನಡೆಸಲು ಅವಕಾಶ ನೀಡಲಾಗಿದೆ ಎಂದು ಕೋರ್ಟ್ ತಿಳಿಸಿದೆ. ಭಾರತೀಯ ಪುರಾತತ್ವ ಇಲಾಖೆಯಿಂದ ವೈಜ್ಞಾನಿಕ ಸರ್ವೆ ನಡೆಸಿ 6 ತಿಂಗಳ ಒಳಗಾಗಿ ವರದಿ ಸಲ್ಲಿಸಬೇಕು. ಸಮೀಕ್ಷೆಯ ವೇಳೆ ಯಾವುದೇ ವಸ್ತುಗಳಿಗೆ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದು ನ್ಯಾಯಾಲಯ ತಿಳಿಸಿದೆ.
ಜ್ಞಾನವಾಪಿ ಮಸೀದಿಯಲ್ಲಿ ದೇವರ ಮೂರ್ತಿಗಳು ಇದ್ದು, ವೈಜ್ಞಾನಿಕ ಸರ್ವೆ ನಡೆಸುವಂತೆ ಕೋರಿ ಐವರು ಹಿಂದೂ ಮಹಿಳೆಯರು ಕೋರ್ಟ್ ಮೆಟ್ಟಿಲೇರಿದ್ದರು. ಮೂರು ತಿಂಗಳ ಕಾಲ ವಾದ-ಪ್ರತಿವಾದ ಆಲಿಸಿದ ಕೋರ್ಟ್ ಇದೀಗ ಜ್ಞಾನವಾಪಿ ಮಸೀದಿಯಲ್ಲಿ ಎ ಎಸ್ ಐ ವೈಜ್ಞಾನಿಕ ಸರ್ವೆ ನಡೆಸುವಂತೆ ಮಹತ್ವದ ತೀರ್ಪು ಪ್ರಕಟಿಸಿದೆ.