HomeKarnatakaBREAKING: ಟಿಪ್ಪರ್ ಡಿಕ್ಕಿ, ಅಪಘಾತದಲ್ಲಿ ಕಾರ್ ನಲ್ಲಿದ್ದ ನಾಲ್ವರು ಸಾವು

BREAKING: ಟಿಪ್ಪರ್ ಡಿಕ್ಕಿ, ಅಪಘಾತದಲ್ಲಿ ಕಾರ್ ನಲ್ಲಿದ್ದ ನಾಲ್ವರು ಸಾವು

ಹಾಸನ: ಟಿಪ್ಪರ್ ಡಿಕ್ಕಿಯಾಗಿ ಇನೋವಾ ಕಾರ್ ನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಮೂವರು ಸಾವನ್ನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಮೃತಪಟ್ಟವರ ಮಾಹಿತಿ ಕಲೆ ಹಾಕಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಸನ ಜಿಲ್ಲೆ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ಟಿಪ್ಪರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಇನೋವಾ ಕಾರ್ ನಲ್ಲಿ ಮಂಗಳೂರು ಕಡೆ ತೆರಳುತ್ತಿದ್ದ ವೇಳೆ ಹಾಸನಕ್ಕೆ ಬರುತ್ತಿದ್ದ ಟಿಪ್ಪರ್ ಡಿಕ್ಕಿಯಾಗಿದೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular