
ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಶುಕ್ರವಾರ ಮಧ್ಯಾಹ್ನದ ಸುಮಾರಿಗೆ ಮಿಥ್ವಾರಾ ಗ್ರಾಮದ ರಸ್ತೆಯಲ್ಲಿ ಮಹಿಳೆಯ ರುಂಡವನ್ನು ಹಿಡಿದ ವ್ಯಕ್ತಿಯೊಬ್ಬ ಕಾಣಿಸಿಕೊಂಡಿದ್ದ. ಸಾರ್ವಜನಿಕರಿಂದ ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿ ರಿಯಾಜ್ನನ್ನು ಬಂಧಿಸಿದ್ದಾರೆ. ಆರೋಪಿ ರಿಯಾಜ್ನನ್ನು ಫತೇಪುರ ಠಾಣೆಗೆ ಕರೆದೊಯ್ಯಲಾಗಿದೆ. ಇದಾದ ಬಳಿಕ ಪೊಲೀಸರು ರಿಯಾಜ್ ಮನೆಗೆ ತೆರಳಿ ಯುವತಿಯ ಇನ್ನುಳಿದ ಮೃತದೇಹದ ಭಾಗವನ್ನು ವಶಕ್ಕೆ ಪಡೆದಿದ್ದಾರೆ.
ಸರ್ಕಲ್ ಆಫೀಸರ್ ರಘುವೀರ್ ಸಿಂಗ್ ಈ ವಿಚಾರವಾಗಿ ಮಾತನಾಡಿದ್ದು, ವಿಚಾರಣೆಯ ಸಂದರ್ಭದಲ್ಲಿ ಆರೋಪಿಯು ತನ್ನ ಸಹೋದರಿಯ ಪ್ರೇಮ ಸಂಬಂಧವು ನನ್ನ ಕೋಪಕ್ಕೆ ಕಾರಣವಾಗಿತ್ತು ಎಂಬುದನ್ನು ಒಪ್ಪಿಕೊಂಡಿದ್ದಾನೆ ಎಂದು ಹೇಳಿದ್ದಾರೆ.
ಶುಕ್ರವಾರ ಬೆಳಗ್ಗೆ 11:30 ರ ಸುಮಾರಿಗೆ ಇದೇ ವಿಚಾರಕ್ಕೆ ರಿಯಾಜ್ ತನ್ನ ಸಹೋದರಿಯ ಜೊತೆ ಜಗಳವಾಡಿದ್ದ. ಆಕೆ ತನ್ನ ಪ್ರೇಮ ಸಂಬಂಧವನ್ನು ಮುರಿದುಕೊಳ್ಳಲು ಒಪ್ಪಿಕೊಂಡಿರಲಿಲ್ಲ ಎನ್ನಲಾಗಿದೆ. ಆ ಸಮಯದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಇಬ್ಬರ ನಡುವೆ ಜಗಳ ತಾರಕಕ್ಕೇರಿದ್ದು ರಿಯಾಜ್ ಹೊರಗೆ ಹೋಗಿ ಕೊಡಲಿ ತಂದು ಆಕೆಯ ರುಂಡ ಕಡಿದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

