HomeKarnataka`ಗೃಹಲಕ್ಷ್ಮೀ' ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ನಿನ್ನೆ ಒಂದೇ ದಿನ 7.77 ಲಕ್ಷ ಮಹಿಳೆಯರ ನೋಂದಣಿ

`ಗೃಹಲಕ್ಷ್ಮೀ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ನಿನ್ನೆ ಒಂದೇ ದಿನ 7.77 ಲಕ್ಷ ಮಹಿಳೆಯರ ನೋಂದಣಿ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಆರಂಭವಾದ ಎರಡನೇ ದಿನವಾದ ಶುಕ್ರವಾರ ಬರೋಬ್ಬರಿ 7.77 ಲಕ್ಷ ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಎರಡನೇ ದಿನವಾದ ಶುಕ್ರವಾರ ಗೃಹಲಕ್ಷ್ಮೀ ಯೋಜನೆಗೆ ಬರೋಬ್ಬರಿ 7.77 ಲಕ್ಷ ಮಹಿಳೆಯರು ನೋಂದೀ ಮಾಡಿಕೊಂಡಿದ್ದಾರೆ. ಮೊದಲ ದಿನ ಕೇವಲ 60,000 ಮಂದಿ ಮಾತ್ರ ನೋಂದಣಿ ಮಾಡಿಸಿಕೊಂಡಿದ್ದರು. ಈ ಮೂಲಕ ಎರಡು ದಿನದಲ್ಲಿ ಒಟ್ಟಾರೆ 8.8 ಲಕ್ಷ ಮಹಿಳಯರು ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಲಕ್ಷ್ಮೀ ಯೋಜನೆಯ ಮೂಲಕ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ ರೂ.2,000/- ಹಣ ಜಮೆ ಮಾಡಲಾಗುತ್ತದೆ. ಗೃಹಲಕ್ಷ್ಮೀ ಯೋಜನೆಯು ಜುಲೈ 19  ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಧೀಕೃತವಾಗಿ ಚಾಲನೆಗೊಂಡಿದೆ. ಪ್ರತಿ ಫಲಾನುಭವಿಯ ನೊಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902 ಗೆ ಕಾಲ್ ಮಾಡಿ ಅಥವಾ 8147500500 ನಂಬರಗೆ ಎಸ್‍ಎಂಎಸ್ ಮೂಲಕ ಸಂದೇಶ ಕಳುಹಿಸಿ, ಮಾಹಿತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳು ಮತ್ತು ನಗರ ಪ್ರದೇಶದಲ್ಲಿ ಕರ್ನಾಟಕ ಒನ್ ಕೇಂದ್ರಗಳು ಅರ್ಜಿ ಸಲ್ಲಿಸುವ ಕೇಂದ್ರಗಳಾಗಿರುತ್ತವೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕವನ್ನು ಪಾವತಿಸತಕ್ಕದ್ದಲ್ಲ ಹಾಗೂ ಯೋಜನೆ ನೋಂದಣಿ ಸಂಪೂರ್ಣ ಉಚಿತವಾಗಿರುತ್ತದೆ. ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅಂವಲಂಬಿತರಾಗದೇ ಅರ್ಜಿಯನ್ನು ಸ್ವತಃ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ. ಕುಟುಂಬದ ಯಜಮಾನಿಗೆ ನೊಂದಣಿ ದಿನಾಂಕ, ಸಮಯ ಮತ್ತು ಸ್ಥಳದ ವಿವರವನ್ನು ಎಸ್‍ಎಂಎಸ್ ಮೂಲಕ ತಿಳಿಸಲಾಗುವುದು. ಈ ಯೋಜನೆಯ ನೋಂದಣಿಗೆ ಯಾವುದೇ ಅಂತಿಮ ದಿನಾಂಕ ಮತ್ತು ಸಮಯವನ್ನು ಸರಕಾರ ನಿಗದಿಪಡಿಸಿರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular