HomeKarnatakaಬೆಂಗಳೂರಿಗೆ ಬರುತ್ತಿದ್ದ ವಿಮಾನದ ತುರ್ತು ದ್ವಾರ ತೆರೆಯಲು ಯತ್ನಿಸಿದ ಪ್ರಯಾಣಿಕ ಅರೆಸ್ಟ್

ಬೆಂಗಳೂರಿಗೆ ಬರುತ್ತಿದ್ದ ವಿಮಾನದ ತುರ್ತು ದ್ವಾರ ತೆರೆಯಲು ಯತ್ನಿಸಿದ ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಮಾರ್ಗ ಮಧ್ಯೆ ವಿಮಾನದ ತುರ್ತು ದ್ವಾರ ತೆರೆಯಲು ಪ್ರಯತ್ನಿಸಿದ ಆರೋಪದ ಮೇಲೆ ಯುವಕನನ್ನು ಬಂಧಿಸಲಾಗಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೋಲೀಸರು ಯುವಕನನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ ರಾಜಮಂಡ್ರಿ ಮೂಲದ ವೆಂಕಟ್ ಮೋಹಿತ್(29) ಬಂಧಿತ ಆರೋಪಿ. ಜುಲೈ 15ರಂದು ಪ್ಯಾರಿಸ್ ನಿಂದ ಏರ್ ಫ್ರಾನ್ಸ್ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವೆಂಕಟ್ ವಿಮಾನ ಬೆಂಗಳೂರು ತಲುಪಲು 4 ಗಂಟೆ ಇರುವಾಗಲೇ ಏಕಾಏಕಿ ಹಿಂಬದಿಯ ಎಡ ಭಾಗದ ದ್ವಾರ ತೆರೆಯಲು ಪ್ರಯತ್ನಿಸಿದ್ದಾನೆ. ಇದರಿಂದಾಗಿ ಸಹ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಮಾನದ ಸಿಬ್ಬಂದಿ ವರದಿ ನೀಡಿದ್ದು, ಏರ್ ಫ್ರೆಂಡ್ಸ್ ಇಂಡಿಯಾ ಡ್ಯೂಟಿ ಮ್ಯಾನೇಜರ್ ಶೀಬಾ ಸ್ವಾಮಿನಾಥನ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ವೆಂಕಟ್ ನನ್ನು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular