HomeKarnatakaಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ಅನುದಾನಿತ ಶಾಲೆಗಳಲ್ಲಿ ನೇಮಕಾತಿ

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ಅನುದಾನಿತ ಶಾಲೆಗಳಲ್ಲಿ ನೇಮಕಾತಿ

ಬೆಂಗಳೂರು: ಖಾಸಗಿ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಗುರುಪಾದ ಸಂಗನಗೌಡ ಪಾಟೀಲ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಮಧು ಬಂಗಾರಪ್ಪ, 2016ರವರೆಗೆ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ ನೀಡಿದೆ. 2016 -20ರ ವರೆಗಿನ ಹುದ್ದೆಗಳ ಭರ್ತಿ ಮಾಡುವ ಕುರಿತು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದನ್ನು 2023ರ ವರೆಗೆ ವಿಸ್ತರಿಸಿ ಶೀಘ್ರವೇ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನುದಾನಿತ ಶಾಲೆಗಳಲ್ಲಿರುವ ಬೋಧಕೇತರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಬೋಧಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular