ಬೆಂಗಳೂರು : ರಾಜ್ಯ ಸರ್ಕಾರ ಮಹತ್ವದ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಿದ ಹಿನ್ನೆಲೆ ದೇವಸ್ಥಾನಗಳಿಗೆ ಭರ್ಜರಿ ಕಲೆಕ್ಷನ್ ಆಗಿದೆ.
ಹೌದು, ಉಚಿತ ಪ್ರಯಾಣ ಶುರುವಾದಾಗಿನಿಂದ ಇಲ್ಲಿವರೆಗೆ ಮಹಿಳೆಯರು ಪುಣ್ಯ ಕ್ಷೇತ್ರಗಳಿಗೆ ದಾಂಗುಡಿ ಇಡುತ್ತಿದ್ದು, ಭರ್ಜರಿಯಾಗಿ ಕಾಣಿಕೆ ಸಂಗ್ರಹವಾಗಿದೆ. ಒಂದೇ ತಿಂಗಳಲ್ಲಿ ಬರೋಬ್ಬರಿ 25 ಕೋಟಿ ಕಾಣಿಕೆ ಸಂಗ್ರಹವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಶ್ರೀರಂಗಪಟ್ಟಣ ನಿಮಿಷಾಂಬ ದೇವಾಲಯದಲ್ಲಿ 27,98 ಲಕ್ಷ, ಕುಕ್ಕೆ ಸುಬ್ರಮಣ್ಯದಲ್ಲಿ 11.16 ಕೋಟಿ, ಮೈಸೂರಿನ ಚಾಮುಂಡೇಶ್ವರಿ ದೇವಾಲಯದಲ್ಲಿ 3,63 ಕೋಟಿ. ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯದಲ್ಲಿ 1,38 ಕೋಟಿ. ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ 1.27 ಕೋಟಿ. ಬೆಂಗಳೂರು ಬನಶಂಕರಿ ದೇವಾಲಯದಲ್ಲಿ 83.64 ಕೋಟಿ ಸೇರಿದಂತೆ ವಿವಿಧ ದೇವಾಲಯಗಳು ಸೇರಿದಂತೆ ಒಟ್ಟು ಬರೋಬ್ಬರಿ 25 ಕೋಟಿ ಕಾಣಿಕೆ ಸಂಗ್ರಹವಾಗಿದೆ ಎಂದು ಹೇಳಲಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ ಆದಾಯದಲ್ಲಿ ಭಾರೀ ಏರಿಕೆ ಕಂಡಿದೆ ಎಂದು ಹೇಳಲಾಗಿದೆ.