ರಾಮನಗರ : ಮನೆಯ ಯಜಮಾನಿಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಖುದ್ದಾಗಿ ಗೃಹಲಕ್ಷ್ಮೀ ಯೋಜನೆ ನೋಂದಣಿ ಪರಿಶೀಲನೆ ಮಾಡಿದ್ದಾರೆ.
ಜಿಲ್ಲೆಯ ಕನಕಪುರದ ಎಲ್ ಎಸ್ ವಿ ರಸ್ತೆಯಲ್ಲಿರುವ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನಿಡಿದ ಡಿಸಿಎಂ ಡಿಕೆ ಶಿವಕುಮಾರ್ ಡಿ ‘ಗೃಹಲಕ್ಷ್ಮೀ’ ಯೋಜನೆಯ ನೋಂದಣಿ ಪ್ರಕ್ರಿಯೆ ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ಅರ್ಜಿ ಹಾಕಲು ಬಂದಿದ್ದ ಮಹಿಳೆಯರು ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಧನ್ಯವಾದ ತಿಳಿಸಿದ್ದಾರೆ.
ಗ್ರಾಮಾಂತರ ಪ್ರದೇಶದಲ್ಲಿ ವಾಸಿಸುವ ಫಲಾನುಭವಿಗಳು ಗ್ರಾಮದ ಸಮೀಪವಿರುವ ಗ್ರಾಮ ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರಗಳಿಗೆ ಮತ್ತು ನಗರ ಪ್ರದೇಶದಲ್ಲಿ ವಾಸಿಸುವ ಫಲಾನುಭವಿಗಳು ಸಮೀಪದ ಕರ್ನಾಟಕ ಒನ್, ವಾರ್ಡ ಕಛೇರಿ, ಸ್ಥಳಿಯ ನಗರಾಡಳಿತ ಸಂಸ್ಥೆಯ ಕಛೇರಿ, ಗೃಹಲಕ್ಷ್ಮೀ ನೋಂದಣಿ ಕೇಂದ್ರಕ್ಕೆ ಹೋಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಕರ್ನಾಟಕ ಒನ್ ಮತ್ತು ಗೃಹಲಕ್ಷ್ಮೀ ಯೋಜನೆ ನೊಂದಣಿ ಸೇವಾ ಕೇಂದ್ರಗಳಳಲ್ಲಿ ಅರ್ಜಿ ಸಲ್ಲಿಕೆಗೆ ಸರ್ವರ್ ಸಮಸ್ಯೆಯಾಗುತ್ತಿದೆ.