HomeKarnatakaBIG NEWS: ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು; ಕೆಳಗಿಳಿಸೋದು ಗೊತ್ತು... ಸಿದ್ದರಾಮಯ್ಯಗೆ ಟಾಂಗ್ ನೀಡಿದ...

BIG NEWS: ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು; ಕೆಳಗಿಳಿಸೋದು ಗೊತ್ತು… ಸಿದ್ದರಾಮಯ್ಯಗೆ ಟಾಂಗ್ ನೀಡಿದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ. ಎದೆ ಕೊಟ್ಟು ನಿಲ್ಲುತ್ತೇನೆ. ಮಂತ್ರಿ ಆಗೋದು ಬಿಡೋದು ಬೇರೆ ಪ್ರಶ್ನೆ. ಯಾರದ್ದೋ ಷಡ್ಯಂತ್ರಕ್ಕೆ ಬಲಿ ಆಗುತ್ತಿದ್ದೇವೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಬಿಲ್ಲವ, ಈಡಿಗ ಮುಖಂಡರ ಸಭೆಯಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್, ನನಗೆ ಸಿಎಂ ಆಯ್ಕೆ ಮಾಡುವುದೂ ಗೊತ್ತು, ಕೆಳಗಿಳಿಸುವುದೂ ಗೊತ್ತು ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ ಹಿಂದುಳಿದ ವರ್ಗಕ್ಕೆ ಸೇರಿದವರು. ಎಲ್ಲರೂ ಒಗ್ಗಟ್ಟಾಗಬೇಕು ಎಂಬ ಕಾರಣಕ್ಕೆ 2013ರಲ್ಲಿ ಬೆಂಬಲ ಕೊಟ್ಟೆದ್ದೆವು. ರಾಜಕೀಯವಾಗಿ ಈಡಿಗ ಸಮಾಜದವರು ಮುಂದೆ ಬರಲಿಲ್ಲ. ಷಡ್ಯಂತ್ರಕ್ಕೆ ನಾವು ಬಲಿಯಾಗುತ್ತಿದ್ದೇವೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular